Advertisement
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6777 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 110 ಸೋಂಕಿತರು ಮೃತಪಟ್ಟಿದ್ದಾರೆ.
Related Articles
Advertisement
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2035 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (662), ಕಲಬುರಗಿ (285), ಬಳ್ಳಾರಿ (284), ಬೆಳಗಾವಿ (263), ದಕ್ಷಿಣ ಕನ್ನಡ (225), ದಾವಣಗೆರೆ (191), ಧಾರವಾಡ (188), ಹಾಸನ (188), ಚಿಕ್ಕಬಳ್ಳಾಪುರ (171), ಉಡುಪಿ (170), ಕೊಪ್ಪಳ (163), ಹಾವೇರಿ (157), ರಾಯಚೂರು (144), ಬಾಗಲಕೋಟೆ (144), ಮಂಡ್ಯ (126) ಮತ್ತು ಬೀದರ್ (114) ಜಿಲ್ಲೆಗಳಿವೆ.
ಇನ್ನುಳಿದಂತೆ, ಗದಗ (96), ಬೆಂಗಳೂರು ಗ್ರಾಮಾಂತರ (82), ತುಮಕೂರು (78), ಯಾದಗಿರಿ (76), ವಿಜಯಪುರ (71), ರಾಮನಗರ (65), ಚಿಕ್ಕಮಗಳೂರು (63), ಉತ್ತರಕನ್ನಡ (57), ಚಾಮರಾಜನಗರ (57), ಕೋಲಾರ (46), ಕೊಡಗು (31), ಶಿವಮೊಗ್ಗ (15) ಮತ್ತು ಚಿತ್ರದುರ್ಗ (12), ಮತ್ತು ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 63033ಕ್ಕೆ ಏರಿಕೆಯಾಗಿದ್ದು, 27877 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 34021ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1134 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 7638 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3724 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3830 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 84 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6388ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2918 ಸೋಂಕಿತರು ಗುಣಮುಖರಾಗಿದ್ದಾರೆ. 3290 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 178 ಸಾವು ಸಂಭವಿಸಿದೆ. ಬೆಂಗಳೂರು ನಗರ (1134) ಹಾಗೂ ಮೈಸೂರು (183) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 6222 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3470 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2639 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 113 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ 5854 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2230 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3441 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 183 ಸಾವು ಸಂಭವಿಸಿದೆ.
ಉಡುಪಿ ಜಿಲ್ಲೆಯಲ್ಲಿ 4969 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2889 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2038 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 42 ಸಾವಿನ ಪ್ರಕರಣಗಳು ದಾಖಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ 4835 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2226 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2446 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 163 ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ 3944 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1082 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2776 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 86 ಸಾವು ಸಂಭವಿಸಿದೆ.