Advertisement
ಈ ಕುರಿತಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎ. ಮಲ್ಲಿಕಾರ್ಜುನ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವೀರಪ್ಪ ಹಾಗೂ ನ್ಯಾ.ಆರ್.ದೇವದಾಸ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.
Related Articles
Advertisement
ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಎನ್.ಪಿ.ಅಮೃತೇಶ್, ಬರ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಪರಿಸ್ಥಿತಿ ಗಂಭೀರವಾಗಿದೆ. ಅವುಗಳಿಗೆ ತಿನ್ನಲು ಮೇವಿಲ್ಲ, ಕುಡಿಯಲು ನೀರಿಲ್ಲದೆ ಸಾಯುವ ಹಂತ ತಲುಪಿವೆ.
ರಾಜ್ಯ ಸರ್ಕಾರ ಜಾನುವಾರಗಳ ಸಂರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರಕ್ಕೆ ಈ ಸಂಬಂಧ ಸೂಕ್ತ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.
ಅಲ್ಲದೆ, ರಾಜ್ಯದ ಪ್ರತಿಯೊಂದು ತಾಲೂಕಿನಲ್ಲೂ ಗೋಶಾಲೆ ತೆರೆದು ಜಾನುವಾರುಗಳಿಗೆ ಅಗತ್ಯ ಮೇವು, ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅರ್ಜಿಯಲ್ಲಿ ಕೋರಲಾಗಿದೆ.