Advertisement

ರಾಜ್ಯದಲ್ಲಿಂದು 634 ಕೋವಿಡ್‌ ಪಾಸಿಟಿವ್‌ ಪ್ರಕರಣ: ಇಬ್ಬರು ಸಾವು

08:08 PM Jun 17, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 634 ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 4,500 ಇದೆ.

Advertisement

ರಾಜ್ಯದಲ್ಲಿ ಫೆಬ್ರವರಿ ಬಳಿಕ ಇದೇ ಮೊದಲ ಬಾರಿ ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ನಗರದ 83ವರ್ಷದ ಮಹಿಳೆ ಹಾಗೂ ದ.ಕ ಜಿಲ್ಲೆಯ 23ವರ್ಷದ ಯುವಕ ಸೇರಿದಂತೆ ಒಟ್ಟು ಇಬ್ಬರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ.

ಆ ಮೂಲಕ ಮರಣ ಪಾಸಿಟಿವ್‌ ದರ ಶೇ.0.31ಕ್ಕೆ ಏರಿಕೆಯಾಗಿದೆ. 22,586 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ ಶೇ. 2.80ರಷ್ಟು ಮಾದರಿಗಳಲ್ಲಿ ಪಾಸಿಟಿವ್‌ ವರದಿಯಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4,166 ವಿದೇಶಿ ಪ್ರಯಾಣಿಕರನ್ನು ಸ್ಕ್ರೀನಿಂಗ್‌ ಮಾಡಲಾಗಿದೆ.

ಬೆಂಗಳೂರು 610, ದ.ಕ. 7, ಉ.ಕ ಹಾಗೂ ಉಡುಪಿ 3, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು 2, ಕಲಬುರಗಿ, ಶಿವಮೊಗ್ಗ, ತುಮಕೂರು, ಬೆಳಾವಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ.

Advertisement

ಉಳಿದ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್‌ ವರದಿಯಾಗಿದೆ. 503ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next