Advertisement
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಆರೋಗ್ಯ ತಪಾಸಣಾ ಶಿಬಿರವನ್ನೂ ಉದ್ಘಾಟಿಸಿದರು.
Related Articles
Advertisement
ರಾಷ್ಟ್ರಪತಿ, ಪ್ರಧಾನಿ ಕನ್ನಡದಲ್ಲೇ ಶುಭಾಶಯ
ಪ್ರದಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಶುಭ ಕೋರಿದ್ದಾರೆ.