Advertisement

ದಾವಣಗೆರೆ ಜಿಲ್ಲೆಯ ವ್ಯಕ್ತಿಗೆ ಕೋವಿಡ್-19 ಸೋಂಕು: 63ಕ್ಕೇರಿದ ಸೋಂಕಿತರ ಸಂಖ್ಯೆ

09:40 AM Mar 28, 2020 | keerthan |

ದಾವಣಗೆರೆ: ಜಿಲ್ಲೆಯ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ. ಇದರೊಂದಿಗೆ ಇಂದು ರಾಜ್ಯದಲ್ಲಿ ಎಂಟನೇ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63ಕ್ಕೇರಿದೆ.

Advertisement

ಫ್ರಾನ್ಸ್ ನಿಂದ ಮಾ. 17 ರಿಂದ ಹೊರಟು ಅಬುಧಾಬಿ ಮೂಲಕ ಬೆಂಗಳೂರಿಗೆ ಬಂದಿದ್ದ 24 ಯುವಕ  ಮಾರ್ಚ್ 18 ರಂದು ದಾವಣಗೆರೆಗೆ ಆಗಮಿಸಿದ್ದರು. ಮಾರ್ಚ್ 25 ರಂದು ಕೆಮ್ಮು, ‌ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್ 26 ರಂದು ಪಾಸಿಟಿವ್ ಎಂದು ದೃಢಪಟ್ಟಿತ್ತು. ಪೂನಾದ ಪ್ರಯೋಗಾಲಯ ಸಹ ಇದನ್ನು ದೃಢಪಡಿಸಿದೆ ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next