ಮುಂಬಯಿ: ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ 64ನೇ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಾಟ್ಕೊàಪರ್ ಪೂರ್ವದ ಝವೇರಿಬೆನ್ ಪೋಪಟ್‌ಲಾಲ್ ಸಭಾಗೃಹದಲ್ಲಿ ನೆರವೇರಿತು.
ಸಮಿತಿ ಅಧ್ಯಕ್ಷ ನ್ಯಾ| ಶೇಖರ್ ಎಸ್. ಭಂಡಾರಿ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕೋತ್ಸವದಲ್ಲಿ ಪನ್ವೇಲ್ ನಗರ ಮಹಾನಗರ ಪಾಲಿಕೆಯ ನಗರ ಸೇವಕ ಸಂತೋಷ್ ಜಿ.ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರು ಇದರ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಎಸ್. ಭಂಡಾರಿ, ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಕಚ್ಚಾರು ಶ್ರೀನಾಗೇಶ್ವರ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಎಂ.ಭಂಡಾರಿ, ಸೌರಭ್ ಎಸ್.ಭಂಡಾರಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.
ಬೆಳಗ್ಗೆ ಸಂಸ್ಥೆಯ ಪದಾಧಿಕಾರಿಗಳನ್ನು ಒಳಗೊಂಡು ಕುಲದೇವರಾದ ಶ್ರೀ ಕಚ್ಚಾರು ನಾಗೇಶ್ವರ ದೇವರಿಗೆ ಆರತಿಗೈದು ದಿನಪೂರ್ತಿ ಜರಗಿದ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಲಾಯಿತು. ಅಧ್ಯಕ್ಷ ಶೇಖರ್ ಎಸ್.ಭಂಡಾರಿ ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿದರು. ಸಂಸ್ಥೆಯ ಸದಸ್ಯರು, ಮಹಿಳೆಯರು ಮತ್ತು ಮಕ್ಕಳು ಸಾಂಸ್ಕೃತಿಕ ವೈಭವ ಪ್ರಸ್ತುತ ಪಡಿಸಿದರು. ಸಮುದಾಯದ ಅಪ್ರತಿಮ ಕಲಾವಿದ ಜಯಶೀಲ ಉಮೇಶ್ ಭಂಡಾರಿ ಮತ್ತು ತಂಡವು ಡೊಂಬ ಯೋಗ ಹಾಗೂ “ತೆಲಿಕೆ ನಲಿಕೆ’ ಹಾಸ್ಯ ಪ್ರಹಸನ ಮತ್ತು ಘಾಟ್ಕೊàಪರ್ ಅಸಲ್ಫಾ ಅಲ್ಲಿನ ಶ್ರೀ ಗೀತಾಂಬಿಕಾ ಕೃಪಾಪೋಷಿತ ಯಕ್ಷಗಾನ ಮಂಡಳಿ ಕಲಾವಿದರು “ಗದಾಯುದ್ಧ’ ಕನ್ನಡ ಯಕ್ಷಗಾನ ಪ್ರದರ್ಶಿಸಿದರು.
ಸಂಸ್ಥೆಯ ಉಪಾಧ್ಯಕ್ಷ ನ್ಯಾ| ರಾಮಣ್ಣ ಎಂ.ಭಂಡಾರಿ, ಗೌ| ಪ್ರ| ಕಾರ್ಯದರ್ಶಿ ವಿಜಯ ಆರ್. ಭಂಡಾರಿ, ಗೌ| ಕೋಶಾಧಿಕಾರಿ ಕರುಣಾಕರ ಜಿ.ಭಂಡಾರಿ, ಜೊತೆ ಕಾರ್ಯದರ್ಶಿಗಳಾದ ಶಶಿಧರ್ ಡಿ.ಭಂಡಾರಿ ಮತ್ತು ಪುರುಷೋತ್ತಮ ಜಿ. ಭಂಡಾರಿ, ಸಲಹಾ ಸಮಿತಿ ಕಾರ್ಯಾಧ್ಯಕ್ಷ ನ್ಯಾ| ಸುಂದರ್ ಜಿ.ಭಂಡಾರಿ, ಕೇಶವ ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಸುರೇಶ್ ಭಂಡಾರಿ ಕಡಂದಲೆ, ಉಪ ಕಾರ್ಯಾಧ್ಯಕ್ಷೆ ಪಲ್ಲವಿ ರಂಜಿತ್ ಭಂಡಾರಿ, ಕಾರ್ಯದರ್ಶಿ ರೇಖಾ ಎ.ಭಂಡಾರಿ ವೇದಿಕೆಯಲ್ಲಿ ಆಸೀನರಾಗಿದ್ದರು.
ಚಿತ್ರ ವರದಿ: ರೋನ್ಸ್ ಬಂಟ್ವಾಳ್