Advertisement

ಕೋವಿಡ್ ವೈರಸ್ ಭೀತಿ: ಜಮ್ಮು-ಕಾಶ್ಮೀರದಲ್ಲಿ 65 ಮಂದಿ ಕೈದಿಗಳ ಬಿಡುಗಡೆ, ಹೈಕೋರ್ಟ್ ಗೆ ವರದಿ

09:26 AM Apr 13, 2020 | Nagendra Trasi |

ಜಮ್ಮು-ಕಾಶ್ಮೀರ:ಮಾರಣಾಂತಿಕ ಕೋವಿಡ್ 19 ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿನ ಇಕ್ಕಟ್ಟಾದ ಜೈಲುಗಳಿಂದ ಸುಮಾರು 65 ಮಂದಿ ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಇದರಲ್ಲಿ ಸಾರ್ವಜನಿಕ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಲ್ಪಟ್ಟಿದ್ದ 22 ಮಂದಿ ಸೇರಿದ್ದಾರೆ.

Advertisement

ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಜೈಲಿನ ಮಹಾ ನಿರ್ದೇಶಕ ಹೈಕೋರ್ಟ್ ಗೆ ಲಿಖಿತ ವರದಿಯನ್ನು ಸಲ್ಲಿಸುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದೆ.

ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಏ.7ರಂದು ಜೈಲಿನ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ಪರಿಶೀಲನೆ ನಡೆಸಿ, ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಬಂಧಿಸಲ್ಪಟ್ಟ 22 ಮಂದಿ, ವಿಚಾರಣಾಧೀನ 32 ಕೈದಿಗಳು, ಅಪರಾಧ ದಂಡ ಸಂಹಿತೆ 107, 109, 151 ಅಡಿ ವಿಚಾರಣೆ ಎದುರಿಸುತ್ತಿದ್ದ 9 ಮಂದಿಯನ್ನು ಬಿಡುಗಡೆಗೊಳಿಸಲು ಶಿಫಾರಸು ಮಾಡಿದೆ. ಅಲ್ಲದೇ 19 ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಇರುವ ಇಕ್ಕಟ್ಟಾದ ಜೈಲುಗಳಿಂದ ವಿಚಾರಣಾಧೀನ ಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲು ಜಮ್ಮು-ಕಾಶ್ಮೀರ ಸರ್ಕಾರ ಮಾರ್ಚ್ 30ರಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ನಿರ್ಧರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next