Advertisement
ಈ ಬಾರಿಯ ಚುನಾವಣೆಯ ಆಮಿಷ ನೀಡಲು ಹೋಗಿ ಸಿಕ್ಕಿಹಾಕಿಕೊಂಡವರಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರೇ ಮೊದಲಿಗರು. ಹೆಬ್ಟಾಳ್ಕರ್ ಅವರ ಭಾವಚಿತ್ರವುಳ್ಳ 659 ಕುಕ್ಕರ್ ಬಾಕ್ಸ್‌ಗಳಿದ್ದ ಇಡೀ ಲಾರಿಯನ್ನು ವಶಪಡಿಸಿ ಕೊಂಡಿರುವ ಚುನಾವಣಾ ಅಧಿಕಾರಿಗಳು, ಲಾರಿ ಚಾಲಕನ ವಿರುದ್ಧ ದೂರು ದಾಖಲಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಮನೆಯ ಕೂಗಳತೆ ದೂರದಲ್ಲಿರುವ ಜಾಧವ ನಗರದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ.
Related Articles
ಬೆಳಗಾವಿ ಉತ್ತರ ಮತಕ್ಷೇತ್ರ ವ್ಯಾಪ್ತಿಯ ವಿವಂತಾ ಅಪಾರ್ಟ್‌ಮೆಂಟ್‌ನಲ್ಲೂ ಲಕ್ಷ್ಮಿ ಹೆಬ್ಟಾಳ್ಕರ್ ಅವರ ಭಾವಚಿತ್ರವುಳ್ಳ ಕುಕ್ಕರ್,ಇಸ್ತ್ರಿ ಪೆಟ್ಟಿಗೆ,ಗ್ಯಾಸ್ ಸ್ಟೌವ್‌ಗಳನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ವಶ ಪಡಿಸಿಕೊಂಡಿದ್ದಾರೆ.ಇವುಗಳನ್ನೂ ಮತದಾರರಿಗೇ ಹಂಚುವ ಸಲುವಾಗಿಯೇ ತರಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
Advertisement
ಪ್ರಹ್ಲಾದ ಜೋಶಿ ವಿರುದ್ಧ ಪ್ರಕರಣಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಡಿ ಸಂಸದ ಪ್ರಹ್ಲಾದ ಜೋಶಿ ವಿರುದ್ಧ ಇಲ್ಲಿನ ಜೆಎಂಎಫ್ಸಿ 3ನೇ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಇಲ್ಲಿನ ಕಸಬಾಪೇಟೆ ಪೊಲೀಸ್ ಸ್ಟೇಶನ್ ವ್ಯಾಪ್ತಿಯ ಕೆಲ ಪ್ರದೇಶ ಮಿನಿ ಪಾಕಿಸ್ತಾನವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 74.50 ಲಕ್ಷ ವಶ
ಪ್ರತ್ಯೇಕ ಪ್ರಕರಣಗಳಲ್ಲಿ ಶನಿವಾರ 74.5 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಕಾರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ. ಅನ್ನು ಶನಿವಾರ ವಶಪಡಿಸಿಕೊಳ್ಳಲಾಗಿದೆ. ನಿಪ್ಪಾಣಿ ಸಮೀಪದ ಕೊಗನೊಳ್ಳಿ ಚೆಕ್ ಪೋಸ್ಟ್‌ನಲ್ಲಿ ಈ ಹಣ ಸಿಕ್ಕಿದ್ದು,ಇಬ್ಬ ರನ್ನು ವಶಕ್ಕೆ ಪಡೆಯಲಾಗಿದೆ. ಈ ಮಧ್ಯೆ, ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 50 ಲಕ್ಷ ರೂ.ಅನ್ನು ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಕ್ರಾಸ್ ಬಳಿಯ ರಾಯಚೂರು- ಬಾಚಿ ರಾಷ್ಟ್ರೀಯ ಹೆದ್ದಾರಿ ಮೇಲೆ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಾದ ಅರ್ಧ ಗಂಟೆಯಲ್ಲೇ ಮತ್ತೂಂದು ಕಾರಿನಲ್ಲಿ 4.50 ಲಕ್ಷ ಪತ್ತೆಯಾಗಿವೆ. ರಾಮದುರ್ಗ ಮೂಲದ ಶಿವಕುಮಾರ ಕೋವಳ್ಳಿ ಎಂಬುವವರು ತಮ್ಮ ಕಾರಿನ ಡಿಕ್ಕಿಯಲ್ಲಿ 4.50 ಲಕ್ಷ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಪಾಸಣೆ ಮಾಡಿದ್ದು, ಸೂಕ್ತ ದಾಖಲಾತಿ ಇಲ್ಲದ ಕಾರಣ ಜಪ್ತಿ ಮಾಡಿದ್ದಾರೆ. ಮಂಜುಗೆ ನೋಟಿಸ್
ಲೋಕೋಪಯೋಗಿ ಇಲಾಖೆಗೆ ಸೇರಿದ ಪ್ರವಾಸಿ ಮಂದಿರದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಇನ್ನೂ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ,ಸಚಿವ ಎ.ಮಂಜುಗೆ ನೋಟಿಸ್ ಜಾರಿ ಮಾಡಿದ್ದಾರೆ. ಕೆಲ ಮಾಧ್ಯ ಮಗಳಲ್ಲಿ ಈ ಬಗ್ಗೆ ಸುದ್ದಿ ಯಾದ ತಕ್ಷ ಣವೇ ಕಾರ್ಯ ಪ್ರವೃತ್ತರಾದ ನೀತಿ ಸಂಹಿತೆ ಜಾರಿ ತಂಡವು ಸಚಿವರ ಕಚೇರಿಗೆ ಬೀಗ ಹಾಕಿ ಹೊರಟು ಹೋಯಿತು. ಬಾಂಗ್ಲಾದಿಂದ ರಾಜ್ಯಕ್ಕೆ ಖೋಟಾ ನೋಟು
ಹೈದರಾಬಾದ್: ಬಾಂಗ್ಲಾದೇಶದಿಂದ ಕರ್ನಾಟಕಕ್ಕೆ 10 ಲಕ್ಷ ರೂ. ಮುಖಬೆಲೆಯ 2000 ರೂ.ಗಳ ಖೋಟಾನೋಟು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಕಂದಾಯ ಜಾಗೃತಿ ದಳ (ಡಿಆರ್‌ಐ) ಹೈದರಾಬಾದ್‌ನಲ್ಲಿ ಬಂಧಿಸಿದೆ. ಈ ಹಣವನ್ನು ಕರ್ನಾಟಕದಲ್ಲಿ ಚುನಾವಣೆಯ ವೇಳೆ ಹಂಚಲು ತರಲಾಗುತ್ತಿತ್ತು ಎಂದು ಹೇಳಲಾಗಿದೆ. ಬೆಂಗಳೂರಿನ ಈ ಇಬ್ಬರನ್ನು ಈಸ್ಟ್ ಕೋಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ವಿಶಾಖಪಟ್ಟಣಂ ಬಳಿ ಶನಿವಾರ ಬೆಳಗ್ಗೆ ಬಂಧಿಸಲಾಗಿದೆ. ಇವರ ಬ್ಯಾಗ್‌ನಲ್ಲಿ ಒಟ್ಟು 510 ನೋಟುಗಳು ಇದ್ದವು. ಖೂಬಾ ಇಂದು ರಾಜೀನಾಮೆ
ಜೆಡಿಎಸ್ ತೊರೆ ಯಲು ಸಿದ್ಧವಾಗಿರುವ ಶಾಸಕ ಮಲ್ಲಿಕಾರ್ಜುನ ಖೂಬಾ ಭಾನುವಾರ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.ಬಳಿಕ ಪಕ್ಷ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀ ನಾಮೆ ನೀಡಲಿದ್ದಾರೆ. ಬಿಜೆಪಿ ವರಿಷ್ಠರು ಸೂಚಿಸುವ ಯಾವುದೇ ಸಮಯದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಲಾಗುವುದು. ಜೆಡಿಎಸ್‌ನ ಸುಮಾರು 15 ಸಾವಿರ ಕಾರ್ಯಕರ್ತರು ನನ್ನೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದರು.