Advertisement
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕು ಸೌಭಾಗ್ಯಲಕ್ಷಿ ಶುಗರ್ ಲಿಮಿಟೆಡ್ ಅಪೆಕ್ಸ್ ಬ್ಯಾಂಕುಗಳ ಅಡಿಯಲ್ಲಿ ಬರುವ ಸುಮಾರು 15 ಬ್ಯಾಂಕುಗಳಿಂದ 366 ಕೋಟಿ ರೂ. ಸಾಲ ಮಾಡಿದ್ದು, ಯೂನಿಯನ್ ಬ್ಯಾಂಕಿನಿಂದ 20 ಕೋಟಿ ರೂ. ಸಾಲ, ತೆರಿಗೆ ಇಲಾಖೆಯಿಂದ 200 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಹರಿಯಂತ್ ಸಹಕಾರಿ ಬ್ಯಾಂಕ್ ನಿಂದ 20 ಕೋಟಿ ರೂ. ಸೇರಿ ಒಟ್ಟು 660 ಕೋಟಿ ರೂ. ಸಾಲ ಹೊಂದಿದ್ದಾರೆ. ಯಾವುದೇ ಪಾವತಿ ಮಾಡದೆ ಇದ್ದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
Related Articles
Advertisement
ಇದೆಲ್ಲವನ್ನು ನೋಡಿಕೊಂಡು ಸರ್ಕಾರ ಸುಮ್ಮನೆ ಕೂತಿರುವುದೇಕೆ. ಎಸ್.ಟಿ ಸೋಮಶೇಖರ್ ಅವರು ಸಹಕಾರ ಮಂತ್ರಿಯಾಗಿದ್ದು, ಅವರು ಏನು ಮಾಡುತ್ತಿದ್ದಾರೆ.ಬೊಮ್ಮಾಯಿ ಅವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಸತ್ಯ ಹರಿಶ್ಚಂದ್ರದ ಮೊಮ್ಮಕ್ಕಳಂತೆ ವರ್ತಿಸುವ ಸಿ.ಟಿ ರವಿ ಅವರೇ ಮುಂದಿನ ವಾರ ನಿಮ್ಮ ದಾಖಲೆಗಳನ್ನು ಬಹಿರಂಗ ಪಡಿಸುತ್ತೇನೆ. ನಾನು ಈ ವಿಚಾರವಾಗಿ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಕ್ಕೆ ನನಗೆ ಲೀಗಲ್ ನೊಟೀಸ್ ನೀಡಿದ್ದು ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲವೇ ಎಂದರು.
ಸಿ.ಟಿ ರವಿ ಅವರೇ ನಾನು ನಿಮ್ಮ ಬಿಜೆಪಿ ಕಚೇರಿಗೆ ನಾನು ಈ ದಾಖಲೆಗಳನ್ನೆಲ್ಲ ತೆಗೆದುಕೊಂಡು ಬರುತ್ತೇನೆ. ನೀವು ನಿಮ್ಮ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂರಿಸಿಕೊಂಡು ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.
ಭವ್ಯ ನರಸಿಂಹಮೂರ್ತಿ ಮಾತನಾಡಿ, ಯಾವುದೇ ಪಕ್ಷದವರು ಸಾಲ ಪಡೆದು ಎನ್‌ಪಿಎ ಆಗಿ ಸಾಲ ಮರುಪಾವತಿ ಮಾಡದಿದ್ದರೆ ಎಲ್ಲರೂ ಪ್ರಶ್ನೆ ಮಾಡಬೇಕು. ಆದರೆ ಸಾಲ ಪಡೆದ ಎಲ್ಲರನ್ನೂ ಸುಸ್ಥಿದಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ರಮೇಶ್ ಜಾರಕಿಹೊಳಿ ಅವರು ಉದ್ದೇಶಿತ ಸುಸ್ಥಿದಾರನಾಗಿದ್ದಾರೆ. ಈ ಸಂಪೂರ್ಣ ಹಗರಣ ನಡೆದಿರುವುದು ಸಹಕಾರಿ ಬ್ಯಾಂಕುಗಳಲ್ಲಿ ನಡೆದಿದ್ದು, ರಮೇಶ್ ಜಾರಕಿಹೊಳಿ ಅವರು ಕಳೆದ 8 ತಿಂಗಳಲ್ಲಿ ಕೇಂದ್ರದ ಸಹಕಾರ ಮಂತ್ರಿಯಾಗಿರುವ ಅಮಿತ್ ಸಾ ಅವರನ್ನು 8 ಬಾರಿ ಭೇಟಿ ಮಾಡಿದ್ದಾರೆ.
2019ರಲ್ಲಿ ಧಾರವಾಡ ಹೈಕೋರ್ಟ್ ನೀಡಿರುವ ಆದೇಶವನ್ನು ಉಲ್ಲಂ ಸಿದ್ದಾರೆ. ಇನ್ನು ಇವರು ಕೊಟ್ಟಿರುವ ಜಾಹೀರಾತಿನ ವಿಳಾಸ ನಕಲಿ ವಿಳಾಸ. ಇದೆಲ್ಲದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.