Advertisement

Shakti Scheme ಮುಂದುವರೆಯಲು ಮುಂಗಡ ಪತ್ರದಲ್ಲಿ 6600 ಕೋ.ರೂ ಮೀಸಲು: ಸಚಿವ ರಾಮಲಿಂಗಾರೆಡ್ಡಿ

12:35 PM Feb 09, 2024 | Team Udayavani |

ಕಲಬುರಗಿ: ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುವ ಶಕ್ತಿ ಯೋಜನೆ ಮುಂದುವರಿಯಲು ಬರುವ ಫೆ. 16 ರಂದು ಮಂಡನೆಯಾಗಲಿರುವ 2024-25 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ 6600 ಸಾವಿರ ಕೋ.ರೂ ನಿಗದಿ (ಮೀಸಲು) ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Advertisement

ಶುಕ್ರವಾರ ಕಲಬುರಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಸಚಿವರು ಮಾತನಾಡಿದರು.‌

ಶಕ್ತಿ ಯೋಜನೆಗೆ ಹಣ ನಿಗದಿ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟ ಭರವಸೆ ನೀಡಿದ್ದಾರೆ.‌ಚುನಾವಣೆ ನಂತರ ಗ್ಯಾರಂಟಿ ನಿಲ್ಲುತ್ತವೆ ಎಂಬ ವಿಪಕ್ಷಗಳಿಗೆ ಇದೇ ಉತ್ತರ ಎಂದು ಹೇಳಿದರು.

ಪ್ರತಿನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ: ಕರ್ನಾಟಕದಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಫ್ರೀ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಪರಿಣಾಮವಾಗಿ ಪ್ರತನಿತ್ಯ 60 ಲಕ್ಷದಂತೆ ಇದೂವರೆಗೆ 150 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ನಾಲ್ಕು ನಿಗಮಗಳಲ್ಲಿ ಕೆಕೆಆರ್ ಟಿಸಿ ಆರ್ಥಿಕವಾಗಿ ಸ್ವಲ್ಪ ಸದೃಡವಾಗಿದೆ. ನಷ್ಟ ಅನುಭವಿಸಿದರೂ ಕೂಡಾ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸೌಲಭ್ಯ ಒದಗಿಸಬೇಕಾಗುತ್ತದೆ. ನಿಗಮ ಲಾಭದಲ್ಲಿ ನಡೆಯಬೇಕಿದ್ದರೆ, ನೌಕರರು ಹಾಗೂ ಸಿಬ್ಬಂದಿ ವರ್ಗದವರು ಸಹಕಾರದಿಂದ ಕೆಲಸ ಮಾಡಬೇಕು ಎಂದರು.

Advertisement

ಕಳೆದ ಎಂಟು ವರ್ಷದಲ್ಲಿ 14,000 ಸಿಬ್ಬಂದಿ ನಿವೃತ್ತರಾದರೂ ನೇಮಕಾತಿ ಆಗಿರಲಿಲ್ಲ. ಆದರೆ ಇದೀಗ 371J ಅಡಿಯಲ್ಲಿ ಆಯ್ಕೆಯಾದ 1614 ಸಿಬ್ಬಂದಿಗಳಿಗೆ ನೇಮಕಾತಿ ಆದೇಶವನ್ನು ಇದೇ 18 ರಂದು‌ ಹಸ್ತಾಂತರಿಸಲಾಗುವುದು. ಕಲ್ಯಾಣ ಕರ್ನಾಟಕಕ್ಕೆ ಈಗಾಗಲೇ 630 ನೂತನ‌ ಬಸ್ ನೀಡಲಾಗಿದೆ. ಮತ್ತೇ ಈಗ ರಾಜ್ಯಕ್ಕೆ 5800 ಹಾಗೂ ಕಲ್ಯಾಣ ಕರ್ನಾಟಕಕ್ಕೆ 475 ನೂತನ ಬಸ್ ನೀಡಲಾಗುವುದು ಎಂದರು.

ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಬೇಡಿಕೆಯಂತೆ ಸ್ಥಳ ಕೊಟ್ಟರೆ ಕಲಬುರಗಿ ನಗರಕ್ಕೆ ಎರಡು ನೂತನ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದರು.

ಸಾರಿಗೆ ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ದಿನಾಂಕ 01-01-2020 ರಿಂದ ಜಾರಿಗೆ ಬರಬೇಕಾಗಿದ್ದ ವೇತನ ಪರಿಷ್ಕರಣೆಯು ದಿನಾಂಕ 17-03-2023 ರಿಂದ ಜಾರಿಗೆ ಬಂದಿರುತ್ತದೆ. ದಿನಾಂಕ 01-01-2020 ರಿಂದ 28-02-2023 ರವರೆಗಿನ 38 ತಿಂಗಳಗಳ ವೇತನ ಪರಿಷ್ಕರಣೆ ಹಿಂಬಾಕಿಯನ್ನು ಪಾವತಿಸುವ ಬೇಡಿಕೆ ಮಂಡಿಸಲಾಯಿತು. ಜೊತೆಗೆ ನೌಕರರು ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಾರಿಗೆ ಸಚಿವರಿಗೆ ನೀಡಿದರು.

ವೇದಿಕೆಯ ಮೇಲೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪಗೌಡ ದರ್ಶನಾಪುರ, ಶಾಸಕರಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕೆಕೆಆರ್ ಟಿಸಿ ಎಂಡಿ ರಾಚಪ್ಪ, ಮುಖಂಡರಾದ ನೀಲಕಂಠ ರಾವ ಮೂಲಗೆ ಚಂದ್ರಕಾಂತ ಗದ್ದಿಗಿ, ಸಂಗಮನಾಥ ರಬಶೆಟ್ಟಿ ಸೇರಿದಂತೆ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next