Advertisement

ಕೋವಿಡ್ ಕಳವಳ-ಆಗಸ್ಟ್ 07: 6670 ಹೊಸ ಪ್ರಕರಣಗಳು ; 3951 ಡಿಸ್ಚಾರ್ಜ್ ; 101 ಸಾವು

08:19 PM Aug 07, 2020 | Hari Prasad |

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6670 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

Advertisement

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 3951 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 101 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,64,924 ಆಗಿದೆ. 84,232 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2998 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 678 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 77,686 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next