Advertisement

ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ 67.90 ಕೋಟಿ ರೂ. ಅನುದಾನ

08:46 PM Sep 26, 2020 | Team Udayavani |

ಜಮಖಂಡಿ: ವಿಧಾನಸಭಾ ಮತಕ್ಷೇತ್ರದ ಅಭಿವೃದ್ಧಿ ಹಾಗೂ ಅನುದಾನ ಬಿಡುಗಡೆ ವಿಳಂಬ ಕುರಿತು ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ನಾಲ್ಕು ಪ್ರಶ್ನೆಗಳಿಗೆ ಸಂಬಂಧಿಸಿದ ಸಚಿವರು ಉತ್ತರಿಸಿದ್ದಾರೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

Advertisement

ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಸದನದಕಲಾಪದಲ್ಲಿ ಟ್ಯಾಕ್ಷಿ, ಅಟೋ ಚಾಲಕರಿಗೆ ನೀಡಬೇಕಾದ ಸಹಾಯಧನ ಕುರಿತು ಪ್ರಶ್ನಿಸಿದಾಗ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ರಾಜ್ಯದಲ್ಲಿ 2,15,155 ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗಿದೆ. ಜಮಖಂಡಿ ಕ್ಷೇತ್ರದಿಂದ 326 ಫಲಾನುಭವಿಗಳ ಅರ್ಜಿ ಸ್ವೀಕೃತವಾಗಿದ್ದು ಅದರಲ್ಲಿ 287 ಜನರಿಗೆ ಪರಿಹಾರ ಸಂದಾಯವಾಗಿದ್ದು ಇನ್ನು 28 ಫಲಾನುಭವಿಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಅಂಗನವಾಡಿ ಕೇಂದ್ರಗಳಗೆ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಔಷಧಿ ಪೂರೈಕೆಯಾಗುತ್ತಿದೆ ಎಂದು ಸದನದಲ್ಲಿ ಪ್ರಶ್ನಿಸಿದಾಗ ಮಹಿಳಾ ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ, ಖಾಸಗಿ ಕಂಪನಿಗಳಿಗೆ ಅನುಮತಿ ನೀಡಿಲ್ಲ ಎಂದು ಉತ್ತರ ನೀಡಿದ್ದಾರೆ ಎಂದರು.

ತಾಲೂಕಿನ ಕಂಕಣವಾಡಿ ಗ್ರಾಮದ ಗುಹೇಶ್ವರ ದೇವಸ್ಥಾನದ ಹತ್ತಿರ ಕೃಷ್ಣಾನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ ಕಾಮಗಾರಿ ಕುರಿತು ಸದನದಲ್ಲಿ ಪ್ರಶ್ನಿಸಿದಾಗ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉತ್ತರಿಸಿ, ಕಂಕಣವಾಡಿ ಗ್ರಾಮದ ಗುಹೇಶ್ವರ ದೇವಸ್ಥಾನದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್‌ ಪ್ರಸ್ತಾವನೆ ಸರಕಾರಕ್ಕೆ ಬಂದಿದೆ. 11 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳುವ ಪ್ರಸ್ತಾವನೆ ಲಭ್ಯವಿದೆ ಎಂದು ಉತ್ತರ ನೀಡಿದ್ದಾರೆ ಎಂದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಹಾಳಾದ ರಸ್ತೆ ಕಾಮಗಾರಿಗಳನ್ನು ದುರಸ್ತಿಪಡಿಸಲು 67.90 ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರಲ್ಲಿ 36.65 ಕೋಟಿ ಬಿಡುಗಡೆ ಮಾಡಲಾಗಿದೆ ಉತ್ತರ ನೀಡಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next