Advertisement

ಕಾಮಡ್‌ ಕೆ ಪರೀಕ್ಷೆಯಲ್ಲಿ ಶೇ.67ರಷ್ಟು ಅಭ್ಯರ್ಥಿಗಳು ಹಾಜರಿ

09:38 PM Sep 14, 2021 | Team Udayavani |

ಬೆಂಗಳೂರು : ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿರುವ ಎಂಜಿನಿಯರಿಂಗ್‌ ಸೀಟುಗಳ ಭರ್ತಿಗೆ ಮಂಗಳವಾರ ನಡೆದ ಕಾಮೆಡ್‌-ಕೆ ಪರೀಕ್ಷೆಯಲ್ಲಿ ಶೇ.67ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು.

Advertisement

ದೇಶದಾದ್ಯಂತ 228 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 66,304 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 44,741 ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಈ ಪೈಕಿ ಕರ್ನಾಟಕದ 23 ನಗರದ 71 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,352 ಅಭ್ಯರ್ಥಿಗಳಲ್ಲಿ ಶೇ.80ರಷ್ಟು (17,295) ಅಭ್ಯರ್ಥಿಗಳು ಹಾಜರಾಗಿದ್ದಾರೆ. ರಾಜ್ಯದಲ್ಲಿ 180 ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸುಮಾರು 20 ಸಾವಿರ ಸೀಟುಗಳ ಭರ್ತಿಗೆ ಕಾಮೆಡ್‌-ಕೆ ಪರೀಕ್ಷೆ ನಡೆದಿದ್ದು, ಯಾವುದೇ ಕೇಂದ್ರದಲ್ಲಿ ನಕಲು ಪ್ರಕರಣ ವರದಿಯಾಗಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಹೊರತಾಗಿ ಬೇರೆ ರಾಜ್ಯಗಳಲ್ಲಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದೇ ಇದ್ದರಿಂದ ಆನಂತರ ಬೇರೆ ಕೇಂದ್ರಗಳಿಗೆ ಅಭ್ಯರ್ಥಿಗಳನ್ನು ಸ್ಥಳಾಂತರಿಸಿ ಪರೀಕ್ಷೆ ನಡೆಸಲಾಗಿದೆ. ರಾಜ್ಯದ ಕೇಂದ್ರಗಳಲ್ಲಿ ಯಾವುದೇ ಅಭ್ಯರ್ಥಿಗಳು ತೊಂದರೆ ಸಂಭವಿಸಿಲ್ಲ.

ಇದನ್ನೂ ಓದಿ:ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಜೈಲು ಶಿಕ್ಷೆ

Advertisement

ತಾತ್ಕಾಲಿಕ ಕೀ-ಉತ್ತರಗಳನ್ನು ಸೆ.17ರಂದು ಹಾಗೂ ಅಂತಿಮ ಉತ್ತರಗಳನ್ನು ಸೆ.23ರಂದು ಬಿಡುಗಡೆ ಮಾಡಲಾಗುವುದು. ಸೆ.26ರಂದು ಸ್ಕೋರ್‌ ಕಾರ್ಡ್‌ಗಳನ್ನು ಅಪ್‌ಲೋಡ್‌ ಮಾಡಲಿದ್ದೇವೆ ಎಂದು ಕಾಮೆಡ್‌-ಕೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್‌.ಕುಮಾರ್‌ ತಿಳಿಸಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next