Advertisement

ರಾಜ್ಯದಲ್ಲಿ ಹೊಸ 68 ಎಥೆನಾಲ್‌ ಘಟಕ: ಡಾ|ರಾಜೇಂದ್ರ ಕುಮಾರ್‌

08:54 PM Jul 07, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 68 ಎಥೆನಾಲ್‌ ಘಟಕಗಳನ್ನು ಸ್ಥಾಪಿಸಲು ಮತ್ತು ಪ್ರಸ್ತುತ ಇರುವುದರ ಸಾಮರ್ಥ್ಯ ಹೆಚ್ಚಿಸುವ ಸಂಬಂಧ ಕೇಂದ್ರ ಸರಕಾರದಿಂದ ಅನುಮೋದನೆ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮದ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಹೇಳಿದ್ದಾರೆ.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರತ ಸಕ್ಕರೆ ಕಾರ್ಖಾನೆಗಳಲ್ಲಿ 32 ಕಾರ್ಖಾನೆಗಳಲ್ಲಿ ಎಥೆನಾಲ್‌ ಉತ್ಪಾದನ ಘಟಕಗಳಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು  ಘಟಕ ಸ್ಥಾಪಿಸುವ ಗುರಿ ಇದೆ ಎಂದರು.

ಭಾರತದಲ್ಲಿ 400 ಕೋಟಿ ಲೀಟರ್‌ ಎಥೆನಾಲ್‌ ಉತ್ಪಾದಿಸುತ್ತಿದ್ದು, ಈಗಾಗಲೇ ಶೇ.10ರಷ್ಟು ಮಿಶ್ರಣದ ಗುರಿ ಸಾಧಿಸಲಾಗಿದೆ. 2025ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೇ.20ರಷ್ಟು  ಮಿಶ್ರಣದ ಗುರಿ ಹೊಂದಿದ್ದಾರೆ. ಇದಕ್ಕೆ ಬೇಕಾಗಿರುವ 900 ಕೋಟಿ ಲೀಟರ್‌ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಎಥೆನಾಲ್‌ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ರೀತಿಯಲ್ಲಿ ರಾಜ್ಯವೂ ಒಂದು ನೀತಿ ರೂಪಿಸುವ ಅಗತ್ಯವಿದೆ. ಜತೆಗೆ ಮುಂದಿನ ದಿನಗಳಲ್ಲಿ ಪೊಟ್ಯಾಷಿಯಂ ಮಿಶ್ರಣ ಘಟಕಗಳನ್ನು ಸ್ಥಾಪಿಸಿ ವ್ಯಾಪಾರ ವಹಿವಾಟು ಸ್ಥಾಪಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂದರು.

ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಆರ್‌. ಶ್ರೀಧರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

ಜು. 8ರಂದು ವಿಚಾರ ಸಂಕಿರಣ :

ಎಥೆನಾಲ್‌ ಉತ್ಪಾದನೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಜು.8ರಂದು ಎಂ.ಜಿ.ರಸ್ತೆಯ ಹೊಟೇಲ್‌ ತಾಜ್‌ನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು  ರಾಜೇಂದ್ರಕುಮಾರ್‌ ಹೇಳಿದರು. ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ, ಸಕ್ಕರೆ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಹಾಗೂ ವಿವಿಧ ಕ್ಷೇತ್ರಗಳ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next