ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6805 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5602 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 93 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,58,254 ಆಗಿದೆ. 80,281 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2897 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 671 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 75068 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2544 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (431), ಮೈಸೂರು (361), ಶಿವಮೊಗ್ಗ (292), ಬೆಳಗಾವಿ (229), ಉಡುಪಿ (217), ಧಾರವಾಡ (212), ದಾವಣಗೆರೆ (197), ಕಲಬುರಗಿ (196), ರಾಯಚೂರು (181), ದಕ್ಷಿಣ ಕನ್ನಡ (173), ಬಾಗಲಕೋಟೆ (168), ತುಮಕೂರು (160), ಹಾಸನ (158), ಮಂಡ್ಯ (134), ಕೊಪ್ಪಳ (132), ಗದಗ (124), ಚಿಕ್ಕಬಳ್ಳಾಪುರ (117), ಕೋಲಾರ (107) ಜಿಲ್ಲೆಗಳಿವೆ.
ಇನ್ನುಳಿದಂತೆ, ಬೀದರ್ (98), ಚಾಮರಾಜನಗರ (95), ಉತ್ತರಕನ್ನಡ (77), ಹಾವೇರಿ (64), ಚಿಕ್ಕಮಗಳೂರು (59), ವಿಜಯಪುರ (58), ಚಿತ್ರದುರ್ಗ (58), ಕೊಡಗು (51), ರಾಮನಗರ (41), ಯಾದಗಿರಿ (37) ಮತ್ತು ಬೆಂಗಳೂರು ಗ್ರಾಮಾಂತರ (34) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 27,930 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 20,491 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 48,421 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 2,90,073 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 12,91,002 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 15,81,075 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.