ನವದೆಹಲಿ: ದೇಶದಲ್ಲಿ ಹೊಸ ಕೋವಿಡ್ 19 ಸೋಂಕು ಪ್ರಕರಣ ಶೇ.69ರಷ್ಟು ಇಳಿಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಜೂನ್ 01) ತಿಳಿಸಿದೆ. ಮೇ 7ರ ಹೊತ್ತಿಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಅತೀ ಹೆಚ್ಚಳವಾಗಿತ್ತು. ಬಳಿಕ ಕೋವಿಡ್ ಸೋಂಕು ಪ್ರಕರಣ ಇಳಿಕೆಯಾಗತೊಡಗಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ವೊಡಾಫೋನ್ – ಐಡಿಯಾ ನೀಡುತ್ತಿದೆ ಅಗ್ಗದ ರೀಚಾರ್ಜ್ ಪ್ಲ್ಯಾನ್ : ಇಲ್ಲಿದೆ ಸಂಪೂರ್ಣ ಮಾಹಿತಿ
ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 1.27 ಲಕ್ಷ ಕೋವಿಡ್ ಪ್ರಕರಣ ವರದಿಯಾಗಿದೆ. ಮೇ 28ರಿಂದ 2 ಲಕ್ಷಕ್ಕಿಂತ ಕಡಿಮೆ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಇದೀಗ ದೇಶದಲ್ಲಿ ಸೋಂಕು ಪ್ರಕರಣ ಕಡಿಮೆಯಾಗತೊಡಗಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಎಎನ್ ಐಗೆ ತಿಳಿಸಿದ್ದಾರೆ.
ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಶೇ.50ಕ್ಕೆ ಇಳಿಕೆಯಾಗಿದೆ. ದಿನದಲ್ಲಿ 1.3 ಲಕ್ಷ ಸಕ್ರಿಯ ಪ್ರಕರಣಗಳು ಇಳಿಕೆಯಾಗತೊಡಗಿದೆ. ಕಳೆದ ಒಂದು ವಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಪ್ರಕರಣ ಸತತವಾಗಿ ಇಳಿಕೆಯಾಗುತ್ತಿದೆ ಎಂದು ಹೇಳಿದರು.
ಕೋವಿಡ್ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಶೇ.92ರಷ್ಟಾಗಿದೆ. ದೇಶದಲ್ಲಿ 21.60 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.