ಇವು ಸಿಎಂ ಗೃಹ ಕಚೇರಿ “ಕೃಷ್ಣಾ’ದಲ್ಲಿ ನಡೆದ ಸಭೆ ಯಲ್ಲಿ ಇಂಧನ ಇಲಾಖೆ ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದ ರಾಮಯ್ಯ ಅವರು ಕೇಳಿದ ಸರಣಿ ಪ್ರಶ್ನೆಗಳು.
Advertisement
ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಹಂತಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ (ಮುಖ್ಯ ಎಂಜಿನಿ ಯರ್)ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಚಾಟಿ ಬೀಸಿದರು.
ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ? ವಿಚಕ್ಷಣ ದಳದಲ್ಲಿ ಎಷ್ಟು ಅಧೀಕ್ಷಕರು ಇದ್ದೀರಿ? ಏನು ಮಾಡುತ್ತಿ ದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿ ¨ªಾರೆ ಎನ್ನುವು ದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎಂದೂ ಹೇಳಿದರು. ಅಧಿಕಾರಿಗಳ ಸಮಜಾಯಿಷಿ
ಇದಕ್ಕೂ ದೈನಂದಿನ ಬಳಕೆಯು 180 ಮಿಲಿಯನ್ ಯೂನಿಟ್‌ನಿಂದ 260 ಮಿಲಿಯನ್ ಯೂನಿಟ್‌ಗಳಿಗೆ ಏರಿಕೆಯಾಗಿದೆ. ಹಗಲು ಗರಿಷ್ಠ ವಿದ್ಯುತ್ ಬೇಡಿಕೆ 11,000 ಮೆ.ವ್ಯಾ.ನಿಂದ 16,000 ಮೆ.ವ್ಯಾ.ಗೆ ಏರಿಕೆಯಾಗಿದೆ (ಮಳೆಗಾಲದಲ್ಲಿ). ಜಲವಿದ್ಯುತ್ ಮತ್ತು ಪವನ ವಿದ್ಯುತ್ ಲಭ್ಯತೆಯ ಕೊರತೆಯಿಂದಾಗಿ, ರಾತ್ರಿ ವೇಳೆ ಸುಮಾರು 10,000 ಮೆ.ವ್ಯಾ. ವಿದ್ಯುತ್ ಕೊರತೆ ಎದುರಿಸಲಾಗುತ್ತಿದೆ. ವಿದ್ಯುತ್ ವಿನಿಮಯ ಕೇಂದ್ರಗಳಲ್ಲಿಯೂ ಹೆಚ್ಚಿನ ಬೇಡಿಕೆಯಿರುತ್ತದೆ. ಇದರ ಹೊರತಾಗಿಯೂ ರಾಜ್ಯದಿಂದ 1,000ದಿಂದ 1,500 ಮೆ.ವ್ಯಾ. ಖರೀದಿಸಲು ಪ್ರಯತ್ನಗಳು ನಡೆಯು ತ್ತಿವೆ ಎಂದು ಸಮಜಾಯಿಷಿ ನೀಡಿ ದರು. ಆಗ ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು.
Related Articles
Advertisement
ಸೆಕ್ಷನ್ 11 ಜಾರಿ; ಮುಕ್ತ ಮಾರಾಟಕ್ಕೆ ಕಡಿವಾಣರಾಜ್ಯದ ಮುಕ್ತ ಮಾರುಕಟ್ಟೆಗಳಿಂದ ವಿದ್ಯುತ್ ಪಡೆಯಲು ರಾಷ್ಟ್ರೀಯ ವಿಪತ್ತಿನ ಅಡಿ ವಿದ್ಯುತ್ ಕಾಯ್ದೆ ಸೆಕ್ಷನ್ 11 ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಉತ್ಪಾದಕರಿಂದ (ಶಾಖೋತ್ಪನ್ನ, ಸಹ-ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಮೂಲ) ಸುಮಾರು 800 ಮೆ.ವ್ಯಾ. ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಗಮನಕ್ಕೆ ತಂದರು.