ಪ್ರಯಾಗ್‌ರಾಜ್ : ವಿಧಾನ ಸಭಾ ಚುನಾವಣಾ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ 7 ಮಂದಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಹಂಡಿಯಾ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ “ಪಾಕಿಸ್ಥಾನ ಜಿಂದಾಬಾದ್” ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಪ್ರಾಥಮಿಕವಾಗಿ ಇದು ಸಮಾಜವಾದಿ ಪಕ್ಷದ ಸಾರ್ವಜನಿಕ ಸಭೆಯಂತೆ ಕಂಡುಬಂದಿದ್ದು, ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ವಿಡಿಯೋದಲ್ಲಿ ಪಕ್ಷದ ಅಭ್ಯರ್ಥಿ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಘೋಷಣೆಗಳನ್ನು ಕೂಗುತ್ತಿರುವುದನ್ನು ಗಮನಿಸಿದ ಪೊಲೀಸರು ಆ ವ್ಯಕ್ತಿಗಳನ್ನು ಗುರುತಿಸಿ ಎಫ್‌ಐಆರ್ ದಾಖಲಿಸಿದ್ದಾರೆ. ಭಾನುವಾರ ಮತದಾನ ನಡೆಯುತ್ತಿರುವುದರಿಂದ ಗುರುತು ಪತ್ತೆಯಾದವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಹಾಂಡಿಯಾ ವೃತ್ತಾಧಿಕಾರಿ ಡಾ. ಭೀಮ್ ಕುಮಾರ್ ಗೌತಮ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಂಡಿಯಾ ವಿಧಾನಸಭಾ ಕ್ಷೇತ್ರದ ಎಸ್‌ಪಿ ಅಭ್ಯರ್ಥಿ ಹಕೀಮ್ ಲಾಲ್ ಬಿಂದ್, ಚುನಾವಣೆಯನ್ನು “ಹಿಂದೂ ವರ್ಸಸ್ ಮುಸ್ಲಿಂ” ಮಾಡುವ ಉದ್ದೇಶದಿಂದ “ಬಿಜೆಪಿ ಜನರಿಂದ ಡಬ್ ಮಾಡಿ ವೀಡಿಯೊವನ್ನು ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಪೊಲೀಸರು ವರದಿ ದಾಖಲಿಸುವ ಮುನ್ನ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿತ್ತು ಪಕ್ಷವು ಈ ವಿಡಿಯೋವನ್ನು ತನ್ನ ಮಟ್ಟದಲ್ಲಿ ತನಿಖೆ ಮಾಡುತ್ತಿದೆ. “ನನ್ನ ಯಾವುದೇ ಸಭೆಗಳಲ್ಲಿ ಎಲ್ಲಿಯೂ ಇಂತಹ ಘೋಷಣೆಗಳನ್ನು ಕೂಗಲಾಗಿಲ್ಲ” ಎಂದು ಅವರು ಹೇಳಿದ್ದಾರೆ.