Advertisement
ಶಿಥಿಲಾವಸ್ಥೆಯಲ್ಲಿರುವ ಕಾರಣ ಈ ವಸತಿ ನಿಲಯವು ವಾಸಕ್ಕೆ ಯೋಗ್ಯವಲ್ಲ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳಿಂದ ಮುಚ್ಚಿ, ವಿದ್ಯಾರ್ಥಿನಿಯರನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಖಾಸಗಿ ಕಟ್ಟ ಡಕ್ಕೆ ತಿಂಗಳಿಗೆ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿತ್ತು. ವಸತಿ ನಿಲಯದ ದುರಸ್ತಿಗೆ ಸರಕಾರಕ್ಕೆ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ದೊರೆತಿರಲಿಲ್ಲ.
ಹೆಚ್ಚುವರಿ ವಸತಿ ನಿಲಯಗಳಿಗಾಗಿ ಬೇಡಿಕೆ ಇದ್ದು, ಆ ಬಗ್ಗೆಯೂ ಸರಕಾರದ ಗಮನಕ್ಕೆ ತರಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೂವತ್ತು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ವಸತಿ, ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ದಿ| ಕುದ್ಮುಲ್ ರಂಗರಾವ್ ಹೆಣ್ಣು ಮಕ್ಕಳ ವಸತಿ ನಿಲಯವನ್ನು ಸ್ಥಾಪಿಸಲಾಗಿತ್ತು. ಹೆಚ್ಚುವರಿ ವಿದ್ಯಾರ್ಥಿ ನಿಲಯಕ್ಕೆ ಆಗ್ರಹ
ಸದ್ಯ ಜಿಲ್ಲೆಯಲ್ಲಿ 29 ವಸತಿ ನಿಲಯಗಳಿದ್ದು, ಇದರಲ್ಲಿ 10 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ, 19 ಮೆಟ್ರಿಕ್ ಪೂರ್ವ ವಸತಿ ನಿಲಯಗಳಿವೆ. ಇದರಲ್ಲಿ 820 ವಿದ್ಯಾರ್ಥಿಗಳಿಗೆ ವಾಸ್ತವ್ಯ ಹೂಡಲು ಅವಕಾಶವಿದೆ. ಆದರೆ ಪ್ರತಿ ವರ್ಷ ಸುಮಾರು 1800 ಅರ್ಜಿಗಳು ಬರುತ್ತವೆ. ಬಳಿಕ ವಿದ್ಯಾರ್ಥಿಗಳ ಆಯ್ಕೆ ಮಾಡಿ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ನಗರದಲ್ಲಿ 2 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹುಡುಗರಿಗೆ, 2 ಮೆಟ್ರಿಕ್ ಪೂರ್ವ ವಸತಿ ನಿಲಯ ಹುಡುಗಿಯರಿಗೆ, ಒಂದು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹುಡುಗರಿಗೆ, ಒಂದು ಮೆಟ್ರಿಕ್ ಪೂರ್ವ ವಸತಿ ವ್ಯವಸ್ಥೆ ಹುಡುಗರಿಗೆ ಇದೆ. ನಗರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿಲ್ಲ. ಹೆಚ್ಚುವರಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ವಿವಿಧ ಸಂಘಟನೆಗಳು ಸರಕಾರಕ್ಕೆ ಮನವಿ ಮಾಡಿವೆ.
Related Articles
ನಗರದ ಹೊರಭಾಗಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯ ಸೌಲಭ್ಯಗಳು ದೊರೆತಾಗ ಉತ್ತಮ ವಿದ್ಯಾಭ್ಯಾಸ ಪಡೆಯುವ ಅವಕಾಶವಿತ್ತು. ಇದೀಗ ಖಾಸಗಿ ಪಿಜಿಗಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಆದಷ್ಟು ಬೇಗ ಪರ್ಯಾಯ ವ್ಯವಸ್ಥೆ ಮಾಡಬೇಕು.
- ರಘುರಾಜ್ ಕದ್ರಿ,
ಅಖೀಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷ
Advertisement
ಹೆಚ್ಚುವರಿ ವಸತಿ ನಿಲಯಕ್ಕೆ ಪ್ರಸ್ತಾವನೆ ಸಲ್ಲಿಕೆನಗರ ವ್ಯಾಪ್ತಿಯಲ್ಲಿ ಇಲಾಖೆಯ ವಸತಿ ನಿಲಯಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಹೆಚ್ಚುವರಿ ನಾಲ್ಕು ವಸತಿ ನಿಲಯಗಳನ್ನು ನಗರ ವ್ಯಾಪ್ತಿಯಲ್ಲಿ ತೆರೆಯುವಂತೆ ಇಲಾಖೆ ವತಿಯಿಂದ ಸರಕಾರಕ್ಕೆ ಮನವಿ ನೀಡಲಾಗಿದೆ.
– ಯೋಗೀಶ್,
ಸಮಾಜ ಕಲ್ಯಾಣಾಧಿಕಾರಿ, ದ.ಕ.