ನವದೆಹಲಿ: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮರಾವತಿಯ ವಿದರ್ಭ ಪ್ರದೇಶದಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮೇ 07) ಘೋಷಿಸಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿನಿಂದ ಬಾಣಂತಿ ಸಾವು: ವಿಷ ಸೇವಿಸಿ ಆಸ್ಪತ್ರೆಯ ಆವರಣದಲ್ಲಿ ಒದ್ದಾಡಿದ ಪತಿ !
ಸರ್ಕಾರದ ಆದೇಶದ ಪ್ರಕಾರ, ಮೇ 9ರಂದು ಮಧ್ಯಾಹ್ನ 12ಗಂಟೆಯಿಂದ ಮೇ 15ರವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ, ಹಣ್ಣು ಮಾರಾಟಗಾರರು, ಜನರಲ್ ಸ್ಟೋರ್ಸ್ಸ್, ಮೆಡಿಕಲ್ ಶಾಪ್, ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿರಲಿದೆ ಎಂದು ಆದೇಶದಲ್ಲಿ ವಿವರಿಸಿದೆ.
ಲಾಕ್ ಡೌನ್ ಅವಧಿಯಲ್ಲಿ ಯಾರಾದರೂ ಕೋವಿಡ್ 19 ನಿರ್ಬಂಧವನ್ನು ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ. ಪೊಲೀಸ್ ಮತ್ತು ಕಂದಾಯ ಇಲಾಖೆ ಹೊರತುಪಡಿಸಿ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಮಾಡುವಂತೆ ಆದೇಶದಲ್ಲಿ ತಿಳಿಸಿದೆ.
ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳು ನೀಡಿದ ವರದಿ ಆಧಾರದ ಮೇಲೆ ಅಮರಾವತಿ ಪ್ರದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಹೇಳಿದೆ.