Advertisement

ಹಳಿ ತಪ್ಪಿದ ರೈಲು: ಐವರು ಪ್ರಯಾಣಿಕರ ದುರ್ಮರಣ

06:00 AM Oct 11, 2018 | |

ರಾಯ್‌ಬರೇಲಿ: ನ್ಯೂ ಫ‌ರಕ್ಕಾ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ ಹಾಗೂ ಐದು ಬೋಗಿಗಳು ಹಳಿ ತಪ್ಪಿದ ಪರಿಣಾಮ ಐವರು ಪ್ರಯಾಣಿಕರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರಪ್ರದೇಶದ ರಾಯ್‌ಬರೇಲಿ ಸಮೀಪ ಸಂಭವಿಸಿದೆ. ಗಾಯಾಳುಗಳಲ್ಲಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ರಾಯ್‌ಬರೇಲಿಯ ಹರ್ಚಂದ್‌ಪುರ ಬಳಿ ಬುಧವಾರ ಬೆಳಗಿನಜಾವ 6.10ರ ಸುಮಾರಿಗೆ ಈ ದುರಂತ ಸಂಭವಿಸಿದೆ. 300 ಜನ ಪ್ರಯಾಣಿಸುತ್ತಿದ್ದ ರೈಲು ಹಳಿ ತಪ್ಪಿದ ಸುದ್ದಿ ತಿಳಿಯುದ್ದಂತೆ, ಸ್ಥಳಕ್ಕೆ ಧಾವಿಸಿದ 40ಕ್ಕೂ ಹೆಚ್ಚು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಗ್ರರ ಕೃತ್ಯ ಇರಬಹುದೇ ಎಂದು ತಿಳಿದುಕೊಳ್ಳಲು ಉಗ್ರ ನಿಗ್ರಹ ದಳದ ಸಿಬ್ಬಂದಿಯನ್ನೂ ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 ಲಕ್ಷ ರೂ. ಪರಿಹಾರ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಗಾಯಾಳು ಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚಿಸಿ ದ್ದಾರೆ. ಅಲ್ಲದೆ, ಸಾವಿಗೀಡಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ಚಿಕಿತ್ಸೆಗಾಗಿ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ರೈಲು ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next