Advertisement

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

12:34 PM Oct 30, 2024 | Team Udayavani |

ಭೋಪಾಲ್:‌ ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳು ಸಾವನ್ನಪ್ಪಿದ್ದು, ಉಳಿದ ಮೂರು ಆನೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಏಳು ಆನೆಗಳ ದಿಢೀರ್‌ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜಬಲ್‌ ಪುರದ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಆರೋಗ್ಯ ಕೇಂದ್ರದಲ್ಲಿ ಏಳು ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

ರೈತರು ತಮ್ಮ ಬೆಳೆಗಳಿಗೆ ಕೀಟ ನಾಶಕ ಸಿಂಪಡಿಸಿದ್ದು, ಆ ಬೆಳೆಯನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಆನೆಗಳ ಸಾವಿಗೆ ಸಂಬಂಧಪಟ್ಟಂತೆ ದೆಹಲಿ ಮೂಲದ ವನ್ಯಜೀವಿ ಅಪರಾಧ ನಿಯಂತ್ರಣ ದಳ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಅದರ ಜೊತೆಗೆ ರಾಜ್ಯ ಸರ್ಕಾರ ಕೂಡಾ ತನಿಖೆಗೆ ಆದೇಶ ನೀಡಿದೆ.

Advertisement

ಘಟನಾ ಸ್ಥಳಕ್ಕೆ ನ್ಯಾಶನಲ್‌ ಟೈಗರ್‌ ಕನ್ಸರ್‌ ವೇಷನ್‌ ಅಥಾರಿಟಿಯ ಸೆಂಟ್ರಲ್‌ ವಲಯದ ಅಸಿಸ್ಟೆಂಟ್‌ ಇನ್ಸ್‌ ಪೆಕ್ಟರ್‌ ಜನರಲ್‌ ನಂದಕಿಶೋರ್‌ ಕಾಳೆ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next