Advertisement
ಪ್ರವಾಸಿ ಮಂದಿರದಲ್ಲಿ ಬುಧವಾರ ಅವರು ಮಾತನಾಡಿ, ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಸದನದಲ್ಲಿ ರೈತರ ಕೃಷಿ ಕೊಳೆವೆಬಾವಿಗಳ ಪಂಪ್ ಸೆಟ್‌ಗಳಿಗೆ ಅಕ್ರಮ ಸಕ್ರಮಗೊಳಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ರೈತರಿಂದ ನಿಗದಿತ ಹಣ ಕಟ್ಟಿಸಿಕೊಂಡು 3 ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಸರಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ 34 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದ್ದರಿಂದ ಅಕ್ರಮ ಸಕ್ರಮಗೊಳಿಸಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಪದೇ ಪದೆ ಉಂಟಾಗುವ ವಿದ್ಯುತ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ 400 ಸಬ್‌ಸ್ಟೇಷನ್‌ಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ಅಗತ್ಯವಾದ 3000 ಮೆಗಾವ್ಯಾಟ್ ವಿದ್ಯುತ್ ಅನ್ನು ಸ್ಥಳದಲ್ಲಿ ಸೋಲಾರ್ ಸಿಸ್ಟಂ ಮೂಲಕ ಉತ್ಪಾದನೆ ಮಾಡಿ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸುವ ವ್ಯವಸ್ಥೆ ಮಾಡಲಾಗುವುದು ಎಂದರು.