Advertisement

ಅಧಿಕಾರಿಯೊಬ್ಬನ ಮನೆಯಲ್ಲಿ 7 ಕೆಜಿ ಚಿನ್ನ!!: 68 ಕಡೆ ಏಕ ಕಾಲದಲ್ಲಿ ಎಸಿಬಿ ದಾಳಿ

02:39 PM Nov 24, 2021 | Team Udayavani |

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 68 ಕಡೆಗಳಲ್ಲಿ ಭ್ರಷ್ಟ ಅಧಿಕಾರುಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು ಭಾರಿ ಪ್ರಮಾಣದ ಚಿನ್ನಾಭರಣ, ನಗ, ನಗದು ಪತ್ತೆಯಾಗಿದೆ.

Advertisement

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ರಾಜ್ಯದಾಧ್ಯಂತ ಏಕ ಕಾಲದಲ್ಲಿ 408 ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

7 ಕೆಜಿ ಚಿನ್ನ !!

ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪ ಅವರ ಶಿವಮೊಗ್ಗದ ಮನೆಯಲ್ಲಿ 7 ಕೆಜಿ ಗೂ ಅಧಿಕ ಚಿನ್ನಾಭರಣ ಪತ್ತೆಯಾಗದ್ದು, ಪರಿಶೀಲನೆ ಮುಂದು ವರೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವ ತಂಡ ದಾಳಿ ನಡೆಸಿದೆ. ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಲ ಬಡಾವಣೆಯ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಕಲಬುರಗಿಯಲ್ಲಿ ಪಿಬಡ್ಲ್ಯೂಡಿ ಜೆಇ ಮನೆ ಮೇಲೆ ದಾಳಿ

ಕಲಬುರಗಿ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ದಾಳಿ ಮಾಡಲಾಗಿದೆ.

ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಮನೆ ಮತ್ತು ಯಡ್ರಾಮಿ ತಾಲೂಕಿನಲ್ಲಿರುವ ತೋಟದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಲ್ಲದೇ, ಇವರು ಬಾಡಿಗೆ ನೀಡಿರುವ ಮನೆಗಳ ಮೇಲೂ ದಾಳಿ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಶಾಂತಗೌಡ ಜೇವರ್ಗಿ ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿ ಜೆಇ ಆಗಿದ್ದು, ಮೂವರು ಡಿಎಸ್ ಪಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next