Advertisement

Bihar; ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತ್ಯು, ಐವರಿಗೆ ಗಾಯ

07:58 PM Aug 30, 2023 | Team Udayavani |

ಸಸಾರಂ: ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ರಸ್ತೆಬದಿಯಲ್ಲಿ ನಿಂತಿದ್ದ ಟ್ರೇಲರ್ ಟ್ರಕ್‌ಗೆ ಎಸ್‌ಯುವಿ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸಸಾರಂ ಪಟ್ಟಣದ ಶಿವಸಾಗರ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಸ್‌ಯುವಿಯಲ್ಲಿ ಚಾಲಕನ ಹೊರತಾಗಿ 11 ಮಂದಿ ಪ್ರಯಾಣಿಸುತ್ತಿದ್ದರು. ಅತಿ ವೇಗದಿಂದಾಗಿ ಚಾಲಕನು ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಾಣಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತಕ್ಕೀಡಾದ ಎರಡು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಶಿವಸಾಗರದ ಸ್ಟೇಷನ್ ಹೌಸ್ ಆಫೀಸರ್ ರಾಕೇಶ್ ಗೋಸಾಯಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next