Advertisement

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

11:22 AM Jun 29, 2024 | Team Udayavani |

ಮುಂಬಯಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

Advertisement

ಶುಕ್ರವಾರ ರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಕಾರು ಚಾಲಕ ಕಾರಿಗೆ ಪೆಟ್ರೋಲ್ ಹಾಕಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ವೇಗವಾಗಿ ಬರುತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದ್ದು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

Advertisement

Udayavani is now on Telegram. Click here to join our channel and stay updated with the latest news.

Next