ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.
ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ ಎನ್ನಲಾಗಿದ್ದು ಇದರೊಂದಿಗೆ ಕಳೆದ ನಲ್ವತ್ತೆಂಟು ಗಂಟೆಯಲ್ಲಿ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು ಮೂವತ್ತೊಂದು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ ಒಟ್ಟು ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ 16 ಮಂದಿ ಮಕ್ಕಳೇ ಹಾಗೂ ನವಜಾತ ಶಿಶುಗಳು ಸೇರಿವೆ ಎನ್ನಲಾಗಿದೆ.
ಏತನ್ಮಧ್ಯೆ, ಮಹಾರಾಷ್ಟ್ರ ಸರಕಾರ ಈ ಕುರಿತು ಇಂದು ಸಭೆ ನಡೆಸಿ ನಾಂದೇಡ್ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಚರ್ಚೆ ನಡೆಸಿ ಘಟನೆಯ ಕುರಿತು ತನಿಖಾ ಸಮಿತಿಯನ್ನು ರಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಘಟನೆ ಕುರಿತು “ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಅಲ್ಲದೆ ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: OMG2: ಅಕ್ಷಯ್ ಕುಮಾರ್ ʼಓ ಮೈ ಗಾಡ್ -2ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್