ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿರುವ ಅಕ್ರಮ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸ್ಫೋಟದ ಕುರಿತು ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹಿಸಿದೆ ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾನರ್ಜಿ, ಎನ್‌ಐಎಯೊಂದಿಗೆ ತನಗೆ ಯಾವುದೇ ಸಮಸ್ಯೆ ಇಲ್ಲ ಆದರೆ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.
ರಾಜ್ಯ ಪರಿಸರ ಸಚಿವ ಮಾನಸ್ ರಂಜನ್ ಭುನಿಯಾ ಸ್ಫೋಟವನ್ನು ದೃಢಪಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
“ಜನರು ತಮ್ಮ ಪ್ರದೇಶದಲ್ಲಿ ಇರುವ ಯಾವುದೇ ಅಕ್ರಮ ಪಟಾಕಿ ಕಾರ್ಖಾನೆಗಳ ಬಗ್ಗೆ ಮಾಹಿತಿ ನೀಡಲು ಮನವಿ ಮಾಡುತ್ತೇವೆ. ಅಂತಹ ಘಟಕಗಳ ವಿರುದ್ಧ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.
Related Articles
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸ್ಫೋಟದ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದರು ಮತ್ತು ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ಮಧ್ಯಸ್ಥಿಕೆಗೆ ಕೋರಿದರು. ಮೃತ ದೇಹಗಳನ್ನು ಪಶ್ಚಿಮ ಬಂಗಾಳ ಪೊಲೀಸರು ಅಕ್ರಮವಾಗಿ ಸ್ಥಳಾಂತರಿಸುತ್ತಿರುವುದರಿಂದ ಕೇಂದ್ರ ಪಡೆಗಳನ್ನು ನಿಯೋಜಿಸಬೇಕು ಎಂದು ಅಧಿಕಾರಿ ಹೇಳಿದರು.
ಸಂತಾಪ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು,ಮೃತರ ಕುಟುಂಬಕ್ಕೆ 2.5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.