ಕುಣಿಗಲ್: ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂರನೇ ದಿನವಾದ ಸೋಮವಾರ ಜೆಡಿಎಸ್, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಏಳು ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಮೇ 29ರಂದು ಕುಣಿಗಲ್ ಪುರಸಭೆಯ 23ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮೇ 9ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಸೋಮವಾರ ಒಂದೇ ದಿನ ವಾರ್ಡ್ 17, 2, 3, 21ಹಾಗೂ 23ನೇ ವಾರ್ಡ್‌ಗಳಿಗೆ ಏಳು ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
17ನೇ ವಾರ್ಡ್(ಸಾಮಾನ್ಯ ಮಹಿಳೆ)ಕ್ಷೇತ್ರದಿಂದ ಪುರಸಭಾ ಮಾಜಿ ಅಧ್ಯಕ್ಷೆ ಆಯಿಷಾಬಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಕೋಟೆ ಪ್ರದೇಶದಿಂದ ತಾಲೂಕು ಕಚೇರಿ ವರೆಗೆ ಮೆರವಣಿಗೆ ಮೂಲಕ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಮು ಅವರು ಮೂರನೇ ವಾರ್ಡ್‌ನ(ಸಾಮಾನ್ಯ)ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಎರಡನೇ ವಾರ್ಡ್‌ನ ಸಾಮಾನ್ಯ ಮಹಿಳೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಂಜುಳಾ ನಾಮಪತ್ರ ಸಲ್ಲಿಸಿದ್ದಾರೆ. ಬಿ.ಎಸ್.ಮೇಘನಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. 21ನೇ ವಾರ್ಡ್‌ನ (ಸಾಮಾನ್ಯ) ಕ್ಷೇತ್ರದಿಂದ ಕೆ.ವಿ.ಹರೀಶ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ವಾರ್ಡ್ ನಂ.23 ಹಿಂದುಳಿದ ವರ್ಗ(ಎ)ಮಹಿಳಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಎಚ್.ಜ್ಯೋತಿ ನಾಮಪತ್ರ ಸಲ್ಲಿಸಿದ್ದಾರೆ.