Advertisement

ಮಧುರೈ: ಭೀಕರ ಅಪಘಾತಕ್ಕೆ ಬೆಂಗಳೂರಿನ 7 ಮಂದಿ ಬಲಿ 

12:06 PM Apr 07, 2018 | |

ಬೆಂಗಳೂರು: ತಮಿಳುನಾಡಿ ನ ಮಧುರೈ ಬಳಿಯ ವಿರುಧನಗರದ ಹೆದ್ದಾರಿಯಲ್ಲಿ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದ 9 ಜನರ ಪೈಕಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೇಲೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

ಮೃತರ ಕುರಿತಾಗಿನ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಿದೆ. 

Advertisement

Udayavani is now on Telegram. Click here to join our channel and stay updated with the latest news.

Next