Advertisement

ಮೇವಾತ್‌ : ಆಟೋಗೆ ಟ್ರಕ್ ಢಿಕ್ಕಿ ಹೊಡೆದು 7 ಮಂದಿ ದುರ್ಮರಣ

07:50 PM Jul 22, 2022 | Team Udayavani |

ಮೇವಾತ್‌ ( ಹರಿಯಾಣ): ಆಟೋಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿ, 4 ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಶುಕ್ರವಾರ ಸಂಭವಿಸಿದೆ.

Advertisement

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಯಾನಂದ್ ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಪಘಾತಕ್ಕೆ ನಿಖರ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next