Advertisement
ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್‌ಗೆ ಎರಡು, ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ನಾಮ ಪತ್ರ ಸಲ್ಲಿಕೆಗೆ ಜೂ.18 ಅಂತಿಮ ದಿನಾಂಕವಾಗಿದ್ದು, ಮಂಗಳ ವಾರದ ವೇಳೆಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
Related Articles
ಪ್ರತಾಪಗೌಡ ಪಾಟೀಲ್ ಮತ್ತು ಮುನಿರತ್ನ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ, ಎಚ್. ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿ ಮೂಲ ನಿವಾಸಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.
Advertisement
ರಾಜ್ಯಸಭೆ ಅವಕಾಶ ವಂಚಿತ ಪ್ರಕಾಶ್ ಶೆಟ್ಟಿ, ನಿರ್ಮಲ್ ಕುಮಾರ್ ಸುರಾನಾ, ರಮೇಶ್ ಕತ್ತಿ ಕೂಡ ಪರಿಷತ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಕಾಂಗ್ರೆಸ್‌ನಲ್ಲೇನು?ಅರಸು ಮೊಮ್ಮಗ ಸೂರಜ್ ಹೆಗ್ಡೆ, ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷ ಸಯೀದ್ ಅಹಮದ್, ಹಾಲಿ ಸದಸ್ಯ ಎಂ.ಸಿ. ವೇಣುಗೋಪಾಲ್ ಆಕಾಂಕ್ಷಿಗಳಾಗಿದ್ದಾರೆ. ಎರಡು ಸ್ಥಾನಗಳಲ್ಲಿ ಒಂದನ್ನು ಅಲ್ಪಸಂಖ್ಯಾಕರಿಗೆ ನೀಡುವ ಒಲವು ಇದ್ದು, ಮುಸ್ಲಿಂ ಮತ್ತು ಕ್ರೆ„ಸ್ತರು ತಮಗೇ ಬೇಕು ಎಂಬ ಒತ್ತಡ ಹೇರುತ್ತಿದ್ದಾರೆ. ಆಕಾಂಕ್ಷಿಗಳಲ್ಲಿ ಕರಾವಳಿಯ ಐವನ್ ಡಿ’ಸೋಜಾ, ಎಚ್.ಎಂ. ರೇವಣ್ಣ, ರಾಮಚಂದ್ರಪ್ಪ, ಮುದ್ದ ಹನುಮಗೌಡ ಸೇರಿದ್ದಾರೆ. ಜೆಡಿಎಸ್‌ನಲ್ಲಿ ಯಾರ್ಯಾರು?
ಜೆಡಿಎಸ್‌ನಲ್ಲಿ ಒಂದು ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಆದರೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಟಿ.ಎ. ಶರವಣ, ಕುಪೇಂದ್ರರೆಡ್ಡಿ, ಸಿ.ರಾಜಣ್ಣ, ಆರ್.ಪ್ರಕಾಶ್, ಕೋನ ರೆಡ್ಡಿ ಹೆಸರು ಕೇಳಿಬರುತ್ತಿದೆ. ರಾಜ್ಯಸಭೆಗೆ ಅವಿ ರೋಧ ಆಯ್ಕೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನ ಎಚ್.ಡಿ. ದೇವೇಗೌಡ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ವಾಪಸಾತಿಗೆ ಕಡೆಯ ದಿನವಾಗಿದ್ದ ಶುಕ್ರವಾರ ಯಾರೂ ವಾಪಸ್ ಪಡೆಯದ ಕಾರಣ ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನಾಲ್ವರ ಅವಿರೋಧ ಆಯ್ಕೆ ಘೋಷಿಸಿದರು.