Advertisement

7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಕಳವಳಕಾರಿ ಎಂದ ಕೇಂದ್ರ ಸರ್ಕಾರ

06:34 PM Jul 27, 2021 | Team Udayavani |

ನವದೆಹಲಿ: ಕಳೆದ ನಾಲ್ಕು ವಾರಗಳಲ್ಲಿ ದೇಶದ 7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದ್ದು, ಇದು ಕಳವಳಕಾರಿ ಸಂಗತಿಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ(ಜುಲೈ 27) ತಿಳಿಸಿದೆ.

Advertisement

22 ಜಿಲ್ಲೆಗಳಲ್ಲಿ ಕೇರಳದ 7 , ಮಣಿಪುರದ 5, ಮೇಘಾಲಯದ 3 ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

12 ರಾಜ್ಯಗಳಲ್ಲಿ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.10ಕ್ಕಿಂತಲೂ ಅಧಿಕ ಕೋವಿಡ್ ಪಾಸಿಟಿವಿಟಿ ದರ ವರದಿಯಾಗಿರುವುದಾಗಿ ಸರ್ಕಾರದ ಅಂಕಿಅಂಶ ವಿವರಿಸಿದೆ. ಅಲ್ಲದೇ ಜುಲೈ ಅಂತ್ಯದೊಳಗೆ 50 ಕೋಟಿ ಡೋಸ್ ಗಳಷ್ಟು ಕೋವಿಡ್ ಲಸಿಕೆ ನೀಡುವಲ್ಲಿ ಭಾರತ ವಿಫಲವಾಗಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.

ಜನವರಿಯಿಂದ ಜುಲೈ 31ರವರೆಗೆ 51.60 ಕೋಟಿ ಡೋಸ್ ಕೋವಿಡ್ ಲಸಿಕೆ ಸರಬರಾಜು ಮಾಡಲಾಗಿದೆ ಎಂದು ಅಗರ್ವಾಲ್ ಈ ಸಂದರ್ಭದಲ್ಲಿ ವಿವರ ನೀಡಿದ್ದಾರೆ. ಈಗಾಗಲೇ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿಗದಿಪಡಿಸಿರುವಂತೆ ಕೋವಿಡ್ ಲಸಿಕೆಯನ್ನು ಸರಬರಾಜು ಮಾಡಲಾಗುವುದು ಎಂದು ವರದಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next