Advertisement

70 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !

05:16 PM Nov 19, 2020 | Mithun PG |

ಮಧ್ಯಪ್ರದೇಶ: 70 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದಾರುಣ  ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ ಒಲ್ಲಿಜಾ ಗ್ರಾಮದಲ್ಲಿ ನಡೆದಿದೆ.

Advertisement

ವೃದ್ದೆಯು ಹೊಲದಲ್ಲಿ ಬೆಳೆಗಳಿಗೆ ನೀರು ಹಾಯಿಸಲು ತೆರಳಿದ ಸಂದರ್ಭದಲ್ಲಿ,  ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಮಾತ್ರವಲ್ಲದೆ ವೃದ್ದೆಯು ಕಿರುಚಾಡದಂತೆ ಬಾಯಿಗೆ ಮಣ್ಣು ತುರುಕಿದ್ದು, ಖಾಸಗಿ ಅಂಗಕ್ಕೂ ಕೂಡ ಕೋಲನ್ನು ತುರುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಲದಲ್ಲಿ ವಿವಸ್ತ್ರವಾಗಿದ್ದ ವೃದ್ದೆಯ ಶವವನ್ನು ಗ್ರಾಮಸ್ಥರೊಬ್ಬರು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವೃದ್ದೆಯ ಕುಟುಂಬಸ್ಥರಿಗೂ ಮಾಹಿತಿ ನೀಡಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಜೈಲು ಶಿಕ್ಷೆ

ಇದೊಂದು ಭಯಾನಕ ಘಟನೆಯಾಗಿದ್ದು, ಸಂತ್ರಸ್ತೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗ್ಯಾರಸ್ ಪುರ್ ಪೊಲೀಸ್ ಠಾಣೆಯ ಅಧಿಕಾರಿ ಮಹೇಂದ್ರ ಸಖ್ಯಾ ತಿಳಿಸಿದ್ದಾರೆ.

Advertisement

ಕೃಷಿ ಚಟುವಟಿಕೆಗಾಗಿ ಗ್ರಾಮದ ಹೊರವಲಯದಲ್ಲಿ ಭೂಮಿಯನ್ನು ಕೊಳ್ಳಲಾಗಿತ್ತು. ವೃದ್ದೆಯು ಪ್ರತಿನಿತ್ಯ ಹೊಲಕ್ಕೆ ತೆರಳಿ ಬೆಳೆಗಳಿಗೆ ನಿರು ಹಾಯಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಘಟನೆ ಗ್ರಾಮದಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಗ್ರಾಮಸ್ಥರು ಪೊಲೀಸ್ ಠಾಣೆಗೆ ಧಾವಿಸಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಸರ್ಕಾರ ರಚನೆಯಾಗಿ ಮೂರೇ ದಿನದಲ್ಲಿ ನಿತೀಶ್ ಸಂಪುಟದ ಮೊದಲ ವಿಕೆಟ್ ಔಟ್!

Advertisement

Udayavani is now on Telegram. Click here to join our channel and stay updated with the latest news.

Next