Advertisement

ದೋಟಿಹಾಳ: ವಿವಿಧಡೆ 71ನೇ ಗಣರಾಜ್ಯೋತ್ಸವ

06:20 PM Jan 27, 2020 | Suhan S |

ದೋಟಿಹಾಳ: ಕೇಸೂರ ಗ್ರಾಪಂನಲ್ಲಿ ಗ್ರಾಪಂ ಅಧ್ಯಕ್ಷೆ ವಾಲವ್ವ ತಾವರಪ್ಪ ಕಡೇಕೊಪ್ಪ ಅವರು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ರಾಮಣ್ಣ ದಾಸರ ಹಾಗೂ ಇತರರಿದ್ದರು.

Advertisement

ದೋಟಿಹಾಳ ಗ್ರಾಮದ ಪಿಯು ಕಾಲೇಜಿನಲ್ಲಿ ಪ್ರಾಚಾರ್ಯರಾದ ಆದಪ್ಪ ಸಾಲವಾಡಗಿ 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲೆ ಶಿಕ್ಷಕರು ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿಧ್ಯಾರ್ಥಿಗಳು ಹಾಜರಿದ್ದರು.

ದೋಟಿಹಾಳ ಗ್ರಾಪಂನಲ್ಲಿ ಗ್ರಾಪಂ ಅಧ್ಯಕ್ಷ ಗೌಸುಸಾಬ್‌ ಕೊಣ್ಣೂರು ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ ಕಂಟಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿಧ್ಯಾರ್ಥಿಗಳು ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಬಸವರಾಜ ಶೆಟ್ಟರ್‌ ಧ್ವಜಾರೋಹಣ ನೆರವೇರಿಸಿದರು.

ಕ್ಯಾದಗುಂಪಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಲಾಲ್‌ಬಿ ಹುಸೇಸಾಬ್‌ ಬೇವಿನಗಿಡದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪಿಡಿಒ, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳಿದ್ದರು. ಶಿರಗುಂಪಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಸೌಭಾಗ್ಯವತಿ ಪರಸಪ್ಪ ಮೇಗೂರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಅಮರೇಶ ಕರಡಿ, ಗ್ರಾಪಂ ಸದಸ್ಯರು ಇದ್ದರು. ಕಿಲ್ಲಾರಹಟ್ಟಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷ ಚನ್ನನಗೌಡ ಪೊಲೀಸ್‌ ಪಾಟೀಲ್‌ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಜಿಪಂ ಸದಸ್ಯ ಹನಮಗೌಡ ಪಾಟೀಲ್‌, ಪಿಡಿಒ ಚಂದ್ರಶೇಖರ ಕಂದಕೂರು ಹಾಗೂ ಇತರರಿದ್ದರು.

ಬಿಜಕಲ್‌ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ದುರಗಮ್ಮ ಫಕೀರಪ್ಪ ವಾಲ್ಮೀಕಿ, ಮುದೇನೂರ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಚೇತನ ಕುಮಾರ ಹಿರೇಮಠ ಧ್ವಜಾರೋಹಣವನ್ನು ನೆರವೇರಿಸಿದರು.

Advertisement

ನಡವಲಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರುದ್ರಪ್ಪ ವಾಲೇಕರ 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಜಿಪಂ ಸದಸ್ಯ ವಿಜಯನಾಯ್ಕ ಹಾಗೂ ಇತರರಿದ್ದರು. ಕಡೇಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಇಂದರಗಿ, ಕಲಕೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ ಡಿಎಂಸಿ ಅಧ್ಯಕ್ಷರು, ಗೋತಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ ಡಿಎಂಸಿಸಿ ಅಧ್ಯಕ್ಷರು, ಜಾಲಿಹಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ರ್ಯಾವಣಿಕಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next