ಯಾದಗಿರಿ: ಜಿಲ್ಲೆಗೆ ಮಹಾರಾಷ್ಟ್ರದಿಂದ ಹಿಂತಿರುಗಿದವರಲ್ಲಿಕೋವಿಡ್-19 ಸೋಂಕು ಪತ್ತೆಯಾಗುತ್ತಿದ್ದು, ಈವರೆಗೆ 15 ಇದ್ದ ಸೋಂಕಿತರ ಸಂಖ್ಯೆ ಒಮ್ಮಿಂದೊಮ್ಮೆಲೆ ಏರಿಕೆ ಕಂಡಿದೆ.
ಶನಿವಾರ ಜಿಲ್ಲೆಯ 72 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದ್ದು ಸೋಂಕಿತರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ದಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರಲ್ಲಿ ಸೋಂಕು ಪತ್ತೆಯಾಗುತ್ತಿದ್ದು, ಸರ್ಕಾರ ಲಾಕ್ ಡೌನ್ ನಿಯಮ ಸಡಿಲಗೊಳಿಸಿ ಹೊರ ರಾಜ್ಯದಿಂದ ಬರಲು ಅವಕಾಶ ಮಾಡಿಕೊಟ್ಟಿದ್ದೇ ಸೋಂಕು ಇಲ್ಲದ ಜಿಲ್ಲೆಗೆ ಕಂಟಕವಾಗಿ ಪರಿಣಮಿಸಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಇಂದು ಹೊಸ 196 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ.