Advertisement
ಖುದ್ದು ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್ ವಿರುದ್ಧವೇ ಪ್ರಕರಣಗಳು ದಾಖಲಾಗಿವೆ ಎಂದು ನವದೆಹಲಿಯ ಎಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್‌ನ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.
Related Articles
Advertisement
ಜೆಡಿಯುನಲ್ಲಿ:ಸರ್ಕಾರದಲ್ಲಿ ಸಿಎಂ ನಿತೀಶ್ ಕುಮಾರ್ ಸೇರಿ 11 ಮಂದಿ ಇದ್ದಾರೆ. ಈ ಪೈಕಿ ನಾಲ್ವರು ಸಚಿವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಕಾಂಗ್ರೆಸ್‌ನ ಇಬ್ಬರು ಸಚಿವರ ಮೇಲೂ ಕೇಸುಗಳು ಇರುವ ಬಗ್ಗೆ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಬಂಧನ ಭೀತಿಯಲ್ಲಿ ಕಾನೂನು ಸಚಿವ:
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ನೂತನ ಕಾನೂನು ಸಚಿವ ಕಾರ್ತಿಕೇಯ ಸಿಂಗ್ ವಿರುದ್ಧ ವಾರಂಟ್ ಜಾರಿಯಾಗಿದೆ. ಶರಣಾಗುವಂತೆ ಅವರಿಗೆ ಆದೇಶ ನೀಡಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಟುವಾಗಿ ಆಕ್ಷೇಪ ಮಾಡಿದೆ. ಬಿಹಾರ ಬಿಜೆಪಿಯ ವಕ್ತಾರ ನಿಖೀಲ್ ಆನಂದ್ ಮಾತನಾಡಿ “ನಿತೀಶ್ ಕುಮಾರ್ ಸಂಪುಟದ ಸಚಿವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಇಂಥ ಕರಾಳ ಚರಿತ್ರೆ ಹೊಂದಿರುವವರು ರಾಜ್ಯದ ಜನರಿಗೆ ಯಾವುದೇ ರೀತಿಯ ಭದ್ರತೆ ನೀಡಲು ಸಾಧ್ಯವಿಲ್ಲ’ ಎಂದಿದ್ದಾರೆ. ಆರ್‌ಜೆಡಿಯ ಒತ್ತಡದ ಹಿನ್ನೆಲೆಯಲ್ಲಿಯೇ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಎನ್‌ಡಿಎ ಸರ್ಕಾರ ಇದ್ದಾಗಲೂ ಬಿಜೆಪಿಯ 14 ಸಚಿವರು ಇದ್ದರು. ಈ ಪೈಕಿ 11 ಮಂದಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಾಗಿತ್ತು ಎಂದು ಎಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್‌ನ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ. 32- ಒಟ್ಟು ಸಚಿವರು
23- ಇಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಕೇಸು
72- ಶೇಕಡಾವಾರು
17- ಇಷ್ಟು ಸಚಿವರ ವಿರುದ್ಧ ಗಂಭೀರ ಕ್ರಿಮಿನಲ್ ಕೇಸುಗಳು
53- ಶೇಕಡವಾರು
ಶೇ.25- 8-12ನೇ ತರಗತಿ ವರೆಗೆ ಶಿಕ್ಷಣ ಪಡೆದ ಸಚಿವರು (08)
ಶೇ.75- ಪದವಿ ಮತ್ತು ಅದಕ್ಕಿಂತ ಹೆಚ್ಚು ಶಿಕ್ಷಣ ಪಡೆದ ಸಚಿವರು (24) ನನಗೆ ಈ ಬಗ್ಗೆ ಮಾಹಿತಿ ಗೊತ್ತಿಲ್ಲ. ಕಾನೂನು ಸಚಿವರ ವಿರುದ್ಧ ಇರುವ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ
-ನಿತೀಶ್ ಕುಮಾರ್, ಬಿಹಾರ ಮುಖ್ಯಮಂತ್ರಿ