Advertisement
ಅಕ್ರಮ ರೋಹಿಂಗ್ಯಾಗಳನ್ನು ಗಡಿಪಾರು ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು 2017 ರಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ರಾಜ್ಯ ಸರಕಾರದಿಂದ ಈ ಪ್ರತಿಕ್ರಿಯೆ ಬಂದಿದೆ.
Related Articles
Advertisement
ಒಳನುಸುಳುವವರು ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಗಂಭೀರ ಬೆದರಿಕೆ ಒಡ್ಡಿದೆ ಎಂದು ಉಪಾಧ್ಯಾಯ ವಾದಿಸಿದ್ದಾರೆ. ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ಸೇರಿದಂತೆ ಎಲ್ಲಾ ಅಕ್ರಮ ವಲಸಿಗರು ಮತ್ತು ನುಸುಳುಕೋರರನ್ನು ಒಂದು ವರ್ಷದೊಳಗೆ ಗುರುತಿಸಿ,ಬಂಧಿಸಿ ಗಡಿಪಾರು ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡುವಂತೆ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಕಾನೂನುಬಾಹಿರ ವಲಸೆ ಮತ್ತು ಒಳನುಸುಳುವಿಕೆ, ಜಾಮೀನು ರಹಿತ ಮತ್ತು ಸಂಯುಕ್ತವಲ್ಲದ ಅಪರಾಧವನ್ನಾಗಿ ಮಾಡಲು ಸಂಬಂಧಿತ ಕಾನೂನುಗಳನ್ನು ತಿದ್ದುಪಡಿ ಮಾಡಲು ನಿರ್ದೇಶನ ನೀಡುವಂತೆ ಅರ್ಜಿದಾರರ ಅಶ್ವಿನಿ ಕುಮಾರ್ ಉಪಾಧ್ಯಾಯ ಉನ್ನತ ನ್ಯಾಯಾಲಯವನ್ನು ಒತ್ತಾಯಿಸಿದರು.