Advertisement

ವಿವಿಧೆಡೆ 72ನೇ ಗಣರಾಜ್ಯೋತ್ಸವ ಸಂಭ್ರಮ

06:43 PM Jan 27, 2021 | Team Udayavani |

ಯಾದಗಿರಿ: ಸಾರ್ವಜನಿಕರ ಕಷ್ಟಗಳಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌. ಹೇಳಿದರು. ನಗರದ ಜಿಲ್ಲಾಡಳಿತ ಭವನದಲ್ಲಿ 72ನೇ ಗಣರಾಜ್ಯೋತ್ಸವ ನಿಮಿತ್ಯ ಮಂಗಳವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Advertisement

ಇದೇ ಸಂದರ್ಭದಲ್ಲಿ ಗ್ರಾಪಂ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಚುನಾವಣಾ ಆಯೋಗ ಸೇರಿದಂತೆ ಇತರ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

ಪತ್ರಿಕಾ ಭವನ: ನಗರದ ಪತ್ರಕಾ ಭವನದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಂದುಧರ ಸಿನ್ನೂರು «Ì‌ಜಾರೋಹಣ ನೆರವೇರಿಸಿದರು. ಈ ವೇಳೆ ರಾಜ್ಯ ಪರಿಷತ್‌ ಸದಸ್ಯ ಅನಿಲ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಸಿದ್ದಪ್ಪ ಲಿಂಗೇರಿ, ಸೈಯ್ಯದ ಸಾಜಿದ್‌ ಹಯ್ನಾತ್‌, ರಾಜಕುಮಾರ ನಲ್ಲಿಕರ ಇದ್ದರು.

ಬಿಜೆಪಿ ಕಾರ್ಯಾಲಯ: ತಾನು ಉಸ್ತುವಾರಿ ಸಚಿವನಾಗಲಿ ಬಿಡಲಿ ಜಿಲ್ಲೆಯ ಅಭಿವೃದ್ಧಿಗೆ ಸದಾ ನಿಮ್ಮೊಂದಿಗಿರುವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಬಿಜೆಪಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಇಲಾಖೆಯಿಂದ ಮತ್ತು ಸಚಿವನಾಗಿ ನಿಮ್ಮೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಸದಾ ಕೈಜೋಡಿಸುವೆ. ಪಕ್ಷ ಹಾಗೂ ಸರ್ಕಾರದ ಹಿತಕ್ಕಾಗಿ ಎಲ್ಲರೂ ಶ್ರಮಿಸೋಣ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್‌ ಸಚಿವರನ್ನು ಸನ್ಮಾನಿಸಿದರು.

ಈ ವೇಳೆ ಶಾಸಕ ವೆಂಕಟರೆಡ್ಡಿ ಮುದ್ನಾಳ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ ನರಸಿಂಹ ನಾಯಕ ಇತರರು ಇದ್ದರು.

Advertisement

ಪತ್ರಕರ್ತರಿಗೆ ಸನ್ಮಾನ: ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ ನಿಮಿತ್ತ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ವರದಿಗಾರ ಟಿ. ನಾಗೇಂದ್ರ ಸಿಂಗ್‌,ಹುಣಸಗಿಯ ವೆಂಕಟಗಿರಿ ದೇಶಪಾಂಡೆ, ಸೈಯದ್‌ ಸಾಜೀದ ಹಯ್ನಾತ, ರಾಜಕುಮಾರ ನಲ್ಲಿಕರ್‌, ರೂಪೇಶ ಹುಲಿಕರ್‌ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಸೇರಿದಂತೆ ಜಿಲ್ಲಾ ಮಟ್ಟದ ಅ ಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next