Advertisement

370ನೇ ವಿಧಿ ರದ್ಧತಿ ಬಳಿಕ ಯೋಧರ ಸಾವಿನ ಸಂಖ್ಯೆ ಇಳಿಮುಖ

09:27 AM Feb 06, 2020 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ಧುಗೊಳಿಸಿದ ಬಳಿಕ ಭಾರತೀಯ ಯೋಧರ ಸಾವಿನ ಸಂಖ್ಯೆ ಇಳಿಮುಖವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗೃಹವ್ಯವಹಾರಗಳ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

Advertisement

ರಾಜ್ಯಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡುತ್ತಾ ಕಿಶನ್ ರೆಡ್ಡಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷ ಫೆಬ್ರವರಿ 13ರಿಂದ ಆಗಸ್ಟ್ 4ರವರೆಗಿನ 173 ದಿನಗಳ ಅವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಯ 82 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಂಡ ಬಳಿಕ 2020ರ ಜನವರಿ 24ರವರೆಗೆ ಈ ಭಾಗದಲ್ಲಿ ವಿವಿಧ ಪ್ರಕರಣಗಳಲ್ಲಿ ಭದ್ರತಾ ಪಡೆಯ 22 ಯೋಧರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿಯನ್ನು ಕಿಶನ್ ರೆಡ್ಡಿ ಅವರು ಸದನಕ್ಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಕಳೆದ ವರ್ಷ ಆಗಸ್ಟ್ 5ರ ಬಳಿಕ ಒಟ್ಟು 32 ಉಗ್ರಗಾಮಿಗಳು ಹತರಾಗಿದ್ದಾರೆ, 10 ಉಗ್ರರನ್ನು ಬಂಧಿಸಲಾಗಿದೆ ಮತ್ತು ಭಯೋತ್ಪಾದಾನಾ ಸಂಬಂಧಿತ ಘಟನೆಗಳಲ್ಲಿ 19 ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಚಿವ ಕಿಶನ್ ರೆಡ್ಡಿ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next