Advertisement

ಕೋವಿಡ್ ಕಳವಳ-ಆಗಸ್ಟ್ 20: 7385 ಹೊಸ ಪ್ರಕರಣ ; 6231 ಡಿಸ್ಚಾರ್ಜ್ ; 102 ಸಾವು

08:39 PM Aug 20, 2020 | Hari Prasad |

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7385 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

Advertisement

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6231 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 102 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,56,975 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 01 ಲಕ್ಷದ 70 ಸಾವಿರಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. 1,70,381 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 82,149 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4429 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 705 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಆ ಬಳಿಕದ ಸ್ಥಾನಗಳಲ್ಲಿ ಶಿವಮೊಗ್ಗ (188), ಮೈಸೂರು (253), ಬಳ್ಳಾರಿ (483), ಬೆಳಗಾವಿ (358), ಉಡುಪಿ (351), ಧಾರವಾಡ (159), ದಾವಣಗೆರೆ (245), ಹಾಸನ (196), ದಕ್ಷಿಣ ಕನ್ನಡ (177), ಮಂಡ್ಯ (109), ಬಾಗಲಕೋಟೆ (159), ಕಲಬುರಗಿ (210), ರಾಯಚೂರು (111), ಗದಗ (114), ಕೊಪ್ಪಳ (132), ಹಾವೇರಿ (111), ತುಮಕೂರು (138), ಉತ್ತರ ಕನ್ನಡ (115), ಚಾಮರಾಜನಗರ (120), ವಿಜಯಪುರ (112) ಮತ್ತು ಚಿಕ್ಕಮಗಳೂರು (124) ಜಿಲ್ಲೆಗಳಿವೆ.

Advertisement

ಇನ್ನುಳಿದಂತೆ, ತುಮಕೂರು (138), ಕೋಲಾರ (69), ಚಿಕ್ಕಬಳ್ಳಾಪುರ (76), ಬೆಂಗಳೂರು ಗ್ರಾಮಾಂತರ (77), ಚಿತ್ರದುರ್ಗ (60), ಬೀದರ್ (85), ಯಾದಗಿರಿ (68) ಮತ್ತು ಕೊಡಗು (46) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 25,989 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 33,614 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 59,603 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 6,08,113 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 16,48,749 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 22,56,862 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 99,822ಕ್ಕೆ ಏರಿಕೆಯಾಗಿದ್ದು, 64,022 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 34,186ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1613 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 16,200 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 10,072 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5933 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 195 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 12304 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 7302 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 4682 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 320 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 9707ಕ್ಕೆ ಏರಿಕೆಯಾಗಿದ್ದು ಇವರಲ್ಲಿ 7120 ಸೋಂಕಿತರು ಗುಣಮುಖರಾಗಿದ್ದಾರೆ. 2291 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 294 ಸಾವು ಸಂಭವಿಸಿದೆ. ಬೆಂಗಳೂರು ನಗರ (1613) ಹಾಗೂ ಮೈಸೂರು (320) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 9629 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7554 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 1896 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 179 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 9389 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6370 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2937 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 82 ಸಾವಿನ ಪ್ರಕರಣಗಳು ದಾಖಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 9097 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4971 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3982 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 144 ಸಾವು ಸಂಭವಿಸಿದೆ.

ಧಾರವಾಡ ಜಿಲ್ಲೆಯಲ್ಲಿ 8546 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6046 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2242 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 258 ಸಾವು ಸಂಭವಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ 6271 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4230 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1900 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 141 ಸಾವು ಸಂಭವಿಸಿದೆ.

ರಾಯಚೂರು ಜಿಲ್ಲೆಯಲ್ಲಿ 5634 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3865 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1701 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 68 ಸಾವು ಸಂಭವಿಸಿದೆ.

ವಿಜಯಪುರ ಜಿಲ್ಲೆಯಲ್ಲಿ 5259 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4332 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 861 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 66 ಸಾವು ಸಂಭವಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next