ನವಿಮುಂಬಯಿ: ಮಕ್ಕಳಿಗೆ ಶಿಕ್ಷಣದೊಂದಿಗೆ ರಾಷ್ಟ್ರಪ್ರೇಮದ ಬಗ್ಗೆ ಅರಿವು ಮೂಡಿಸಿದಾಗ ಅವರು ದೇಶದ ಆಸ್ತಿಯಾ ಗಬಲ್ಲರು. ಬೋಂಬೆ ಬಂಟ್ಸ್ ಅಸೋಸಿಯೇ ಶನ್ ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲೂ ಅಪಾರ ಸಾಧನೆ ಮಾಡುತ್ತಿದೆ. ವಿದ್ಯಾರ್ಥಿ ಗಳು ಇದರ ಸದುಪಯೋಗ ಪಡೆದುಕೊ ಳ್ಳಬೇಕು. ರಾಷ್ಟ್ರ ಸುಭದ್ರವಾಗಿರಲು ವಿದ್ಯಾರ್ಥಿ ಗಳ ಪಾತ್ರ ಮಹತ್ತರವಾಗಿದೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಮುರಳಿ ಕೆ. ಶೆಟ್ಟಿ ತಿಳಿಸಿದರು.
ಬಾಂಬೆ ಬಂಟ್ಸ್ ಅಸೋಸಿಯೇಶನ್ ವತಿಯಿಂದ ಜೂಯಿ ನಗರದ ಬಂಟ್ಸ್ ಸೆಂಟರ್‌ನ ಸಂಕುಲದಲ್ಲಿ ಜ. 26ರಂದು ನಡೆದ 73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಧ್ವಜಾರೋಹಣಗೈದು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ ಬರುವಲ್ಲಿ ಶಿಕ್ಷಕ ವೃಂದದವರು ಶ್ರಮಿಸಬೇಕು ಎಂದರು.
ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ದೇಶದ ಮೂರು ಸಶಸ್ತ್ರ ಪಡೆಗಳ ಮಹಾದಂಡನಾಯಕ ಜ| ಬಿಪಿನ್ ರಾವತ್, ಹಿರಿಯ ಸ್ವಾತಂತ್ರÂ ಹೋರಾಟಗಾರರಾದ ಸುಭಾಶ್ಚಂದ್ರ ಬೋಸ್, ಡಾ| ಬಿ. ಆರ್. ಅಂಬೇಡ್ಕರ್, ಜವಾಹರ್‌ಲಾಲ್ ನೆಹರೂ, ಭಗತ್ ಸಿಂಗ್ ಅವರ ಭಾವಚಿತ್ರವನ್ನು ಅನಾವರಣ ಗೊಳಿಸಿ ಪುಷ್ಪನಮನ ಸಲ್ಲಿಸಲಾಯಿತು.
ಬಾಂಬೆ ಬಂಟ್ಸ್ ಅಸೋಸಿಯೇಶನ್ ಇದರ ಉಪಾಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುನೀಲ್ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ಶಂಕರ್ ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮ್‌ಸುಂದರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಗೋಪಾಲ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಶಿಕಾಂತ್ ರೈ, ಮಾಜಿ ಅಧ್ಯಕ್ಷರಾದ ಎನ್. ಸಿ. ಶೆಟ್ಟಿ, ಜಯಂತ್ ಕೆ. ಶೆಟ್ಟಿ, ನ್ಯಾಯವಾದಿ ರತ್ನಾಕರ್ ಶೆಟ್ಟಿ, ಸಂತೋಷ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸದಾನಂದ ಶೆಟ್ಟಿ, ನ್ಯಾಯವಾದಿ ಗುಣಕರ್ ಶೆಟ್ಟಿ, ಶಿಕ್ಷಣ ಸಂಸ್ಥೆಯ ಆಡಳಿತ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗಗಳ ಪ್ರಾಂಶುಪಾಲರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧ್ವಜ ವಂದನೆಗೈದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಮಾಣ ಪತ್ರ, ಸ್ಮರಣಿಕೆಯನ್ನಿತ್ತು ಗೌರವಿಸಿ ಅಭಿನಂದಿಸಿದರು. ಉನ್ನತ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ಸರ್ವರನ್ನು ಸ್ವಾಗತಿಸಿದರು. ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಾಷ್ಟ್ರಭಕ್ತಿ ಮೂಡಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿಯತ್ತ ನಮ್ಮ ಗಮನ ಹರಿಯುತ್ತದೆ. ಅಂತಹ ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನನ್ನ ದೇಶ ಎನ್ನುವ ಅಭಿಮಾನ ವಿದ್ಯಾರ್ಥಿಗಳಲ್ಲಿ ಮೂಡಿದಾಗ ಮಾತ್ರ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಅಭಿವೃದ್ಧಿಯ ಪಥದತ್ತ ಸಾಗುತ್ತಿರುವುದು ಅಭಿಮಾನ ಸಂಗತಿ. ದೇಶವು ಇಂದು ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿರುವ ಸಂದರ್ಭದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ. ಬಾಂಬೆ ಬಂಟ್ಸ್ ಅಸೋಸಿಯೇಶನ್ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ, ಗೌರವಿಸುವ ಕಾರ್ಯವನ್ನು ಮಾಡುತ್ತಿದೆ.
–ಸಿಎ ಸುರೇಂದ್ರ ಕೆ. ಶೆಟ್ಟಿ, ಉಪಾಧ್ಯಕ್ಷರು, ಬಾಂಬೆ ಬಂಟ್ಸ್ ಅಸೋಸಿಯೇಶನ್
ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ತೊಡಗಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸಂಸ್ಥೆಯ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಂಡು ಸುಸಂಸ್ಕೃತರಾಗಿ, ದೇಶದ ಆದರ್ಶ ಪ್ರಜೆಗಳಾಗಿ ಬೆಳೆಯಬೇಕು. ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು.
–ನ್ಯಾಯವಾದಿ ರತ್ನಾಕರ ಶೆಟ್ಟಿ , ಕಾರ್ಯಾಧ್ಯಕ್ಷರು ಉನ್ನತ ಶಿಕ್ಷಣ ಸಮಿತಿ ಬಾಂಬೆ ಬಂಟ್ಸ್ ಅಸೋಸಿಯೇಶನ್