Advertisement

Heavy Rain: ಹಿಮಾಚಲ ಪ್ರದೇಶದಾದ್ಯಂತ ಭಾರಿ ಮಳೆಗೆ 74 ಮಂದಿ ಸಾವು, 10,000 ಕೋಟಿ ನಷ್ಟ

09:06 AM Aug 18, 2023 | Team Udayavani |

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಇದುವರೆಗೆ ಮಳೆ, ಭೂಕುಸಿತ, ಮೇಘಸ್ಪೋಟ ಘಟನೆಗಳಿಗೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ ಗುರುವಾರದವರೆಗೆ 74 ಕ್ಕೆ ಏರಿದೆ

Advertisement

ರಕ್ಷಣಾ ಕಾರ್ಯಕರ್ತರು ಶಿಮ್ಲಾದ ಶಿವ ದೇವಾಲಯದ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆದರೆ, ಚಂಬಾದಲ್ಲಿ ಇನ್ನಿಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಿವ ದೇವಾಲಯದಲ್ಲಿ ಸಂಭವಿಸಿದ ಭೂಕುಸಿತ ಸೇರಿದಂತೆ ಶಿಮ್ಲಾದಲ್ಲಿ ಮೂರು ಪ್ರಮುಖ ಭೂಕುಸಿತಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಮುಂಗಾರು ಆರಂಭವಾದ 55 ದಿನಗಳಲ್ಲಿ ರಾಜ್ಯದಲ್ಲಿ 113 ಭೂಕುಸಿತಗಳು ಸಂಭವಿಸಿದ್ದು, ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) 2,491 ಕೋಟಿ ರೂ. ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) 1,000 ಕೋಟಿ ರೂ. ನಷ್ಟವಾಗಿದೆ.

ಶಿಮ್ಲಾದ ಸಮ್ಮರ್ ಹಿಲ್‌ನಲ್ಲಿ ರೈಲ್ವೇ ಹಳಿಗಳ ಒಂದು ಭಾಗ ಕೊಚ್ಚಿ ಹೋಗಿದ್ದು, ಹಳಿಗಳು ಗಾಳಿಯಲ್ಲಿ ನೇತಾಡುತ್ತಿವೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಂತಾಪ ಸೂಚಿಸಿದ್ದು ಭೂಕುಸಿತದಿಂದ ಹಾನಿಗೊಳಗಾದ ಮೂಲಸೌಕರ್ಯವನ್ನು ಮರುನಿರ್ಮಾಣ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದಿದ್ದಾರೆ.

ಪರಿಸರ ದುರ್ಬಲವಾದ ಹಿಮಾಲಯದಲ್ಲಿ ಅವೈಜ್ಞಾನಿಕ ನಿರ್ಮಾಣಗಳು, ಕ್ಷೀಣಿಸುತ್ತಿರುವ ಅರಣ್ಯ ಪ್ರದೇಶ ಮತ್ತು ನೀರಿನ ಹರಿವನ್ನು ತಡೆಯುವ ತೊರೆಗಳ ಬಳಿ ರಚನೆಗಳಿಂದ ಆಗಾಗ್ಗೆ ಭೂಕುಸಿತಗಳು ಉಂಟಾಗುತ್ತವೆ ಎಂದು ತಜ್ಞರು ಹೇಳುತ್ತಾರೆ.

Advertisement

ಜೂನ್ 24 ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 217 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Army Training School: ಕರಾವಳಿಯ ಸೇನಾ ತರಬೇತಿ ಶಾಲೆಗೆ ಬೀಗ?

Advertisement

Udayavani is now on Telegram. Click here to join our channel and stay updated with the latest news.

Next