ಗೋವಾ: ಮೆಡಿಕಲ್ ಆಕ್ಸಿಜನ್ ಕೊರತೆಯಿಂದಾಗಿ ಕಳೆದ ನಾಲ್ಕು ದಿನಗಳಲ್ಲಿ ಗೋವಾದ ಕೋವಿಡ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 74 ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಪ್ಯಾಕೇಜ್ ಕೊಡಲು ಆಗಲ್ಲ ಎನ್ನುವುದು ಬಿಜೆಪಿಯ ಕೈಲಾಗದ ಮಾತುಗಳು : ಕುಮಾರಸ್ವಾಮಿ
ಇದರಲ್ಲಿ 13 ಮಂದಿ ಶುಕ್ರವಾರ(ಮೇ 14) ನಸುಕಿನ 1ಗಂಟೆ ಮತ್ತು 6 ಗಂಟೆಯ ನಡುವೆ ಸಾವನ್ನಪ್ಪಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 15 ಮಂದಿ ಸಾವನ್ನಪ್ಪಿದ್ದರು. ಬುಧವಾರ 20 ಮಂದಿ ಹಾಗೂ ಮಂಗಳವಾರ 2ರಿಂದ 6ಗಂಟೆಯ ನಡುವೆ 26 ಮಂದಿ ತಮ್ಮ ಪ್ರಾಣ ಕಳೆದುಕೊಂಡಿರುವುದಾಗಿ ವರದಿ ವಿವರಿಸಿದೆ.
ಆಸ್ಪತ್ರೆಗೆ ಭೇಟಿ ನೀಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮೆಡಿಕಲ್ ಆಕ್ಸಿಜನ್ ಲಭ್ಯತೆಯ ಕೊರತೆಯಿಂದ ಈ ದುರ್ಘಟನೆ ನಡೆದಿದೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್ ಸರಬರಾಜು ಕೊರತೆ ಇಲ್ಲ ಎಂಬುದಾಗಿ ಸಾವಂತ್ ಸಮಜಾಯಿಷಿ ನೀಡಿದ್ದಾರೆ.
ಪಿಟಿಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಮೇ 1ರಿಂದ 10ರವರೆಗೆ ರಾಜ್ಯವು ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಗದಿಪಡಿಸಿದ್ದ 110 ಮೆಟ್ರಿಕ್ ಟನ್ ಗಳಲ್ಲಿ ಕೇವಲ 66.74 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಪಡೆದಿರುವುದಾಗಿ ಕೇಂದ್ರಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.