Advertisement

ದೆಹಲಿಯಲ್ಲಿ 74 ಸಾವಿರ ಕೋವಿಡ್ 19 ವೈರಸ್ ಪ್ರಕರಣ ಪತ್ತೆ; ಗಾಬರಿ ಪಡಬೇಡಿ: ಕೇಜ್ರಿವಾಲ್

08:47 PM Jun 26, 2020 | Nagendra Trasi |

ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಸೋಂಕಿತರ ಪ್ರಕರಣ ಅತೀ ಹೆಚ್ಚಳವಾಗಿದೆ. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ನಿಟ್ಟಿನಲ್ಲಿ ಯಾವುದೇ ಚಿಂತೆ ಮಾಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾವು ಮೂರು ಪಟ್ಟು ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ. ಆದರೆ ದಿನಂಪ್ರತಿ 3000 ಸಾವಿರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದೆ. ಈವರೆಗೆ ದೆಹಲಿಯಲ್ಲಿ 74 ಸಾವಿರ ಕೋವಿಡ್ 19 ಪ್ರಕರಣ ವರದಿಯಾಗಿದೆ. ಅಲ್ಲದೇ 45 ಸಾವಿರ ಜನರು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.

ದಿಲ್ಲಿಯಲ್ಲಿ ಕೋವಿಡ್ 19 ವೈರಸ್ ಗೆ ಬಲಿಯಾದವರ ಸಂಖ್ಯೆ 2,400ಕ್ಕೆ ಏರಿಕೆಯಾಗಿದೆ. 26000 ಸಾವಿರ ಆ್ಯಕ್ಟಿವ್ ಪ್ರಕರಣಗಳಿದ್ದು, 6000 ಮಂದಿ ಆಸ್ಪತ್ರೆಗಳಲ್ಲಿದ್ದಾರೆ ಎಂದು ಹೇಳಿದರು. ಉಳಿದ ರೋಗಿಗಳು ಮನೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ದಿಲ್ಲಿಯಲ್ಲಿ ಕೋವಿಡ್ 19 ಪ್ರಕರಣ ಗಂಭೀರ ಸ್ವರೂಪದ್ದಾಗಿಲ್ಲ. ಆ ಹಿನ್ನೆಲೆಯಲ್ಲಿ ಹೆಚ್ಚಿನ ರೋಗಿಗಳು ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮಲ್ಲಿ 13,500 ಬೆಡ್ ಗಳು ಸಿದ್ಧವಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next