Advertisement

ಟಿಟಿಡಿಯ ಒಟ್ಟು 743 ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢ! 402 ಮಂದಿ ಗುಣಮುಖ

06:34 PM Aug 09, 2020 | sudhir |

ತಿರುಮಲ : ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಲಾಕ್ ಡೌನ್ ಮುಗಿದು ದೇವರ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಟಿಟಿಡಿಯ ಒಟ್ಟು 743 ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಅನಿಲ್ ಕುಮಾರ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

Advertisement

ಕೋವಿಡ್ ಸೋಂಕಿನಿಂದಾಗಿ ದೇಶದೆಲ್ಲೆಡೆ ಲಾಕ್ ಡೌನ್ ಘೋಷಣೆ ಮಾಡಿ ನಂತರ ಜೂನ್ ೧೧ ರಿಂದ ದೇವಾಲಯಗಳ ದರ್ಶನಕ್ಕೆ ಅವಕಾಶ ಕಲ್ಪಿಸಿದ ನಂತರದಲ್ಲಿ ದೇವಾಲಯದ ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿತ್ತು ಎಂದು ಹೇಳಿದ್ದಾರೆ.
ಒಟ್ಟು 743 ಸಿಬ್ಬಂದಿಗಳಲ್ಲಿ ೪೦೨ ಮಂದಿ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದು 338 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಮತ್ತೆ ಮೂವರು ಸೋಂಕಿಗೆ ಬಲಿಯಾಗಿದ್ದಾರೆ ಎಂದಿದ್ದಾರೆ.

ದೇಶದೆಲ್ಲೆಡೆ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಮ್ಮ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆಯನ್ನು ಕೋವಿಡ್ ಕೇಂದ್ರದಿಂದ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next