Advertisement

CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 75 ಹೊಸ ಪರೀಕ್ಷಾ ಕೇಂದ್ರಗಳು

08:48 PM May 19, 2020 | Hari Prasad |

ಬೆಂಗಳೂರು: ಈಗಾಗಲೇ ಪ್ರಕಟಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ 2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿವೆ.

Advertisement

ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಹೊಸ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಹೊಸದಾಗಿ ಸೇರ್ಪಡೆಗೊಂಡಿರುವ 75 ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿದೆ.

ಈ ಹೊಸ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು ಅಗತ್ಯವೆಂದು ಕಂಡುಬಂದಲ್ಲಿ ತಾವು ಈ ಮೊದಲು ನಮೂದಿಸಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮತ್ತು ಅಭ್ಯರ್ಥಿಗಳು ಆದ್ಯತೆಯ ಮೇರೆಗೆ (ಪ್ರಯಾರಿಟಿ) ತಾವು ಹಾಜರಾಗಬಯಸುವ ಪರೀಕ್ಷಾ ಕೇಂದ್ರಗಳಿಗೆ ಮೂರು ಆಯ್ಕೆಗಳನ್ನು ಅಲ್ಲೇ ನೀಡಬಹುದಾಗಿರುತ್ತದೆ.

Advertisement

ಅಭ್ಯರ್ಥಿಯು ನೀಡುವ ಆದ್ಯತೆ ಮತ್ತು ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸಿಇಟಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಸಿಇಟಿ-2020 ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಹಾಗೂ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರ ಸಾಯಂಕಾಲ 6.00ರಿಂದ ಮೇ 22ರ ಸಾಯಂಕಾಲ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಈಗಾಗಲೇ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಿಕೊಳ್ಳುವ ಅವಕಾಶವನ್ನೂ ಸಹ ನೀಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next