Advertisement

ಧಾರವಾಡ ಜಿಲ್ಲೆಯಲ್ಲಿಂದು 75 ಮಂದಿಗೆ ಕೋವಿಡ್‌-19 ಸೋಂಕು ದೃಢ

08:44 PM Jul 09, 2020 | Sriram |

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವಿಕೆ ಮುಂದುವರೆದಿದ್ದು ಗುರುವಾರ 75 ಜನರಿಗೆ ಸೋಂಕು ಇರುವುದು ದೃಢವಾಗಿದೆ.

Advertisement

ಈ ಮಧ್ಯೆ ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಿದ ಮೊದಲ ದಿನವೇ ಹುಬ್ಬಳ್ಳಿ – ಧಾರವಾಡ ಅವಳಿ ನಗರದಲ್ಲಿ 12 ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ.

ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ.

ಜಿಲ್ಲೆಯಲ್ಲಿ ಈ ಅವಕಾಶ ಜಾರಿಗೊಳಿಸಿದ ಮೊದಲ ದಿನದಂದೇ ಹುಬ್ಬಳ್ಳಿಯಲ್ಲಿ 11 ಹಾಗೂ ಧಾರವಾಡದಲ್ಲಿ ಒಬ್ಬ ವ್ಯಕ್ತಿ ಸೇರಿ ಒಟ್ಟು 12 ಜನರನ್ನು ಹೋಂ ಐಸೋಲೇಷನ್ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕೋವಿಡ್ ದೃಢಪಟ್ಟ ನಂತರ ವೈದ್ಯರ ತಂಡವು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಂಡು ಶಿಫಾರಸ್ಸು ಮಾಡುತ್ತದೆ.ಅದನ್ನು ಆಧರಿಸಿ ಕ್ರಮ ಜರುಗಿಸಲಾಗುತ್ತದೆ.

Advertisement

ಸಾರ್ವಜನಿಕರು ಕೋವಿಡ್ ಬಗ್ಗೆ ಆತಂಕಕ್ಕೆ ಒಳಗಾಗಬಾರದು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ, ಪದೇ ಪದೇ ಕೈತೊಳೆಯುವದು ಮತ್ತಿತರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಸೋಂಕಿನಿಂದ ದೂರ ಇರಬಹುದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next