Advertisement

75 ವಾರ ವಿಶೇಷ ಕಾರ್ಯಕ್ರಮ

11:52 AM Mar 17, 2021 | Team Udayavani |

ದೇವನಹಳ್ಳಿ: ಸ್ವಾತಂತ್ರ್ಯದ ಅಮೃತ ಮಹೋ ತ್ಸವದ ಪ್ರಯುಕ್ತ ಜಿಲ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ 75 ವಾರಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ವಾತಂತ್ರÂ ಅಮೃತ ಮಹೋತ್ಸವವನ್ನು ವಿಶೇಷವಾಗಿ ಆಚರಿಸಬೇಕು ಎಂದು ಜಿಲ್ಲಾಧಿ ಕಾರಿ ಕೆ.ಶ್ರೀನಿವಾಸ್‌ ಹೇಳಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಂದ ಸೈಕಲ್‌ ಜಾಥಾ, ಆರೋಗ್ಯ ಶಿಬಿರ, ಸ್ವತ್ಛತಾ ಕಾರ್ಯ, ಮ್ಯಾರಥಾನ್‌ ಹಾಗೂ ವಾಕಥಾನ್‌ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿನ 75 ಕೆರೆಗಳ ಹೂಳೆತ್ತುವುದು, 75 ಕಲ್ಯಾಣಿಗಳ ಸ್ವತ್ಛತೆ, 75 ಅಂಗನವಾಡಿಗಳಲ್ಲಿ ಕಿಚನ್‌ ಗಾರ್ಡನ್‌, ಶಾಲೆಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿ, ಯೋಗ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಎನ್‌.ಎಸ್‌.ಎಸ್‌, ಎನ್‌ .ಸಿ.ಸಿ., ಭಾರತೀಯ ಸೇವಾದಳ ಹಾಗೂ ಲಯನ್‌ ಕ್ಲಬ್‌ ಸಹಯೋಗದಲ್ಲಿ ಆಯೋಜಿಸು ವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೃದ್ಧಾಶ್ರಮ, ಅನಾಥಾಶ್ರಮ, ವಿಕಲಚೇತನರ ಶಾಲೆಗಳು, ಶಾಲಾ-ಕಾಲೇಜು, ಹಾಸ್ಟೆಲ್ಗಳು ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡು ತ್ತಿರುವ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸಾರುವಂತಹ ಕಾರ್ಯಕ್ರಮಗಳನ್ನು ಹಾಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸುವ ಜೊತೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಉಪನ್ಯಾಸ ನೀಡಬೇಕು. ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ಪಿಡಿಓಗಳು ಜಾಬ್‌ ಕಾರ್ಡ್‌ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಇರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ, ಅವರನ್ನು ಸನ್ಮಾನಿಸುವ ಜೊತೆಗೆ ಅವರಿಂದ ಸಾರ್ವಜನಿಕರಿಗೆ ಉಪನ್ಯಾಸ ನೀಡಲು ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯ ಇತಿಹಾಸ, ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನತೆಗೆ ತಿಳಿಸಬೇಕು ಎಂದು ತಿಳಿಸಿದರು.

Advertisement

75 ದಿವ್ಯಾಂಗರಿಗೆ ಸಲಕರಣೆ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಇಲಾಖೆ ಯ ಯೋಜನೆಗಳನ್ನು ಹಾಗೂ ಸವಲತ್ತುಗಳನ್ನು ಪರಿಚಯಿಸುವ ವಸ್ತು ಪ್ರದರ್ಶನ ನಡೆಸಬೇಕು. 75 ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋಟೆಗಳ ಸ್ವತ್ಛತೆಗೆ ಆದ್ಯತೆ: ನಗರಸಭೆ ವ್ಯಾಪ್ತಿ ಯಲ್ಲಿನ ವಿಶೇಷ ಪಾರಂಪರಿಕ ಕಟ್ಟಡಗಳಲ್ಲಿ ವಸ್ತು ಪ್ರದರ್ಶನ ಆಯೋಜಿಸುವ ಜೊತೆಗೆ ಪಾರಂ ಪರಿಕ ತಾಣಗಳು ಮತ್ತು ಕೋಟೆಗಳ ಸ್ವತ್ಛತೆಗೆ ಆದ್ಯತೆ ನೀಡಬೇಕು ಹಾಗೂ ಪ್ಲಾಸ್ಟಿಕ್‌ ಮುಕ್ತ ಮಾಡುವಲ್ಲಿ ಶ್ರಮಿಸಬೇಕು ಎಂದರು.

ಸ್ಥಳೀಯ ಸಾಂಸ್ಕೃತಿಕ ಪ್ರಕಾರಗಳನ್ನು ಗುರುತಿಸಿ ಕಾರ್ಯ ಕ್ರಮಗಳನ್ನು ಆಯೋಜಿಸಬೇಕು ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಏರ್ಪಡಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸ ಬೇಕು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಎಂ.ಆರ್‌.ರವಿ ಕುಮಾರ್‌, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್. ಕೆ.ನಾಯಕ, ಜಿಪಂ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌ ಆರಾಧ್ಯ.ಬಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯ, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್‌.ಗೀತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂ ಜುಳಾ ದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next