Advertisement

ಕೋವಿಡ್ ಕಳವಳ-ಆಗಸ್ಟ್ 21: 7571 ಹೊಸ ಪ್ರಕರಣ ; 6561 ಡಿಸ್ಚಾರ್ಜ್ ; 93 ಸಾವು

08:05 PM Aug 21, 2020 | mahesh |

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7571 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

Advertisement

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6561 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 93 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,64,546 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 01 ಲಕ್ಷದ 76 ಸಾವಿರಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. 1,70,381 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,066 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4522 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 698 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬಾಗಲಕೋಟೆ (115), ಬಳ್ಳಾರಿ (540), ಬೆಳಗಾವಿ (384), ಬೆಂಗಳೂರು ಗ್ರಾಮಾಂತರ (79), ಬೆಂಗಳೂರು ನಗರ (2948), ಬೀದರ್ (73), ಚಾಮರಾಜ ನಗರ (59 ), ಚಿಕ್ಕಬಳ್ಳಾಪುರ (61 ), ಚಿಕ್ಕಮಗಳೂರು (102 ), ಆ ಬಳಿಕದ ಸ್ಥಾನಗಳಲ್ಲಿ ಚಿತ್ರದುರ್ಗ ( 98), ದಕ್ಷಿಣ ಕನ್ನಡ ( 202), ದಾವಣಗೆರೆ ( 237), ಧಾರವಾಡ (252 ), ಗದಗ (174 ) , ಹಾಸನ (144 ) , ಹಾವೇರಿ (224 ), ಕಲಬುರುಗಿ (145 ), ಕೊಡಗು (65 ), ಕೋಲಾರ ( 50), ಕೊಪ್ಪಳ ( 234), ಮಂಡ್ಯ (99 ), ಮೈಸೂರು ( 00) , ರಾಯಚೂರು ( 100), ರಾಮನಗರ (75 ), ಶಿವಮೊಗ್ಗ ( 227), ತುಮಕೂರು (136 ), ಉಡುಪಿ ( 278), ಉತ್ತರ ಕನ್ನಡ (91 ), ವಿಜಯಪುರ (124 ), ಯಾದಗಿರಿ (255 ) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

Advertisement

ಇಂದು ರಾಜ್ಯದಲ್ಲಿ ಒಟ್ಟು 22992 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 64631 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 57623 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 6,31,105 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 16,83,380 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 23,14,485 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 1,02,770ಕ್ಕೆ ಏರಿಕೆಯಾಗಿದ್ದು, 66602 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 54532ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1635 ಸಾವು ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next